Karkala: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ; ಮಿಯ್ಯಾರು ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕ ಕರ್ತವ್ಯದಿಂದ ವಜಾ

Share the Article

Karkala: ಮಿಯ್ಯಾರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕ ಮದರಶಾ ಎಸ್‌. ಮಕಾಂದರ್‌ ಅವರನ್ನು ನವೆಂಬರ್ 17ರಂದು ಕರ್ತವ್ಯದಿಂದ ವಜಾಗೊಳಿಸಲಾಗಿದೆ.ಮೂಲತಃ ಕಲಬುರಗಿ ನಿವಾಸಿಯಾದ ಮದರಶಾ ಮಕಾಂದರ್‌, 2023ರ ಜೂನ್ ತಿಂಗಳಿನಲ್ಲಿ ಅತಿಥಿ ಶಿಕ್ಷಕರಾಗಿ ಶಾಲೆಗೆ ಸೇರಿದ್ದರು. ವಿದ್ಯಾರ್ಥಿಗಳಿಗೆ ಅನಗತ್ಯವಾಗಿ 200 ಬಸ್ಕಿ ಹೊಡೆಸುವುದು, ಧಾರ್ಮಿಕ ಆಚರಣೆಯ ಭಾಗವಾಗಿರುವ ಜನಿವಾರ ಹಾಗೂ ಕೈಗೆ ಕಟ್ಟುವ ದಾರವನ್ನು ತೆಗೆಸುವಂತೆ ಸೂಚಿಸುವುದು ಸೇರಿದಂತೆ ವಿವಿಧ ರೀತಿಯ ಶಿಕ್ಷೆಗಳನ್ನು ನೀಡುತ್ತಿದ್ದರು ಎಂದು ಮಕ್ಕಳು ಮತ್ತು ಪೋಷಕರು ಆರೋಪಿಸಿದ್ದಾರೆ.ಮಕ್ಕಳಿಂದ ದೂರು ಬಂದ ನಂತರ ಪೋಷಕರು ಮತ್ತು ಸ್ಥಳೀಯರು ಶಾಲೆಗೆ ಆಗಮಿಸಿ ಶಿಕ್ಷಕ ಮಕಾಂದರ್‌ ಅವರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಈ ಹಿಂದೆಯೂ ಅನೇಕ ಬಾರಿ ಎಚ್ಚರಿಕೆ ನೀಡಿದ್ದರೂ ಮಕಾಂದರ್ ತಮ್ಮ ವರ್ತನೆಯನ್ನು ಮುಂದುವರಿಸಿದ್ದರು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದರು. ಪೋಷಕರು ಮತ್ತು ಸ್ಥಳೀಯರ ಪ್ರತಿಭಟನೆಯ ಬೆನ್ನಲ್ಲೇ, ಪ್ರಾಂಶುಪಾಲರು ಮದರಶಾ ಮಕಾಂದರ್‌ ಅವರನ್ನು ಶಾಲಾ ಕರ್ತವ್ಯದಿಂದ ವಜಾಗೊಳಿಸಿದ್ದಾರೆ.

Comments are closed.