Mysore: ‘ಯಕ್ಷಗಾನ ಕಲಾವಿದರು ಸಲಿಂಗಿಗಳು’ – ಡಾ. ಪುರುಷೋತ್ತಮ ಬಿಳಿಮಲೆ ಹೇಳಿಕೆ

Share the Article

Mysore : ಕರ್ನಾಟಕದ ಯಕ್ಷಗಾನ ಕಲಾವಿದರಿಗೆ ಸಂಬಂಧಿಸಿದಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರು ನೀಡಿರುವ ಹೇಳಿಕೆಯೊಂದು ಭಾರಿ ವಿವಾದವನ್ನು ಸೃಷ್ಟಿಸಿ ದೊಡ್ಡಮಟ್ಟದ ಚರ್ಚೆಗೆ ಕಾರಣವಾಗಿದೆ.

ಯಕ್ಷಗಾನವನ್ನು ಕರ್ನಾಟಕದ ಗಂಡು ಕಲೆ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಈ ಕಲೆಗೆ ತನ್ನದೇ ಆದಂತಹ ಒಂದು ವಿಶೇಷ ಮಹತ್ವವಿದೆ. ಯಕ್ಷಗಾನ ಕಲಾವಿದರಿಗೂ ಕೂಡ ಅವರದೇ ಆದ ಒಂದು ಗೌರವವಿದೆ. ಇದೀಗ ಇಂಥ ಕಲಾವಿದರ ಕುರಿತು ಕನ್ನಡದ ಕ್ಯಾತ ಚಿಂತಕ ಹಾಗೂ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿ ಮಲೆಯವರು ‘ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು’ ಎಂಬ ಹೇಳಿಕೆಯನ್ನು ಕೊಟ್ಟು ವಿವಾದಕ್ಕೆ ಗುರಿಯಾಗಿದ್ದಾರೆ ಎಂಬುದಾಗಿ ಪ್ರಜಾವಾಣಿ ವರದಿ ಮಾಡಿದೆ.

ಮೈಸೂರಿನ ಮಾನಸಗಂಗೋತ್ರಿಯ ಪ್ರಸಾರಾಂಗದಲ್ಲಿ ಮಂಗಳವಾರ ‘ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು’ ಹಾಗೂ ‘ನಾವು ಕೂಗುವ ಕೂಗು’ ಕೃತಿಗಳನ್ನು ಬಿಡುಗಡೆ ಮಾಡಿದ ಅವರು, ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು. ಅಲ್ಲಿ ಅಂಥ ಅನಿವಾರ್ಯತೆ ನಿರ್ಮಾಣವಾಗಿತ್ತು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇರುತ್ತಿದ್ದರಿಂದ ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಹೀಗಾಗಿ ಅವರಿಗೆ ಇತರರಿಗೆ ಮೋಹವೇ ಇದ್ದಿದ್ದು ಉಂಟು. ಎಷ್ಟೋ ಬಾರಿ ಸ್ತ್ರೀ ವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಣೆ ಮಾಡಿದ್ದರೆ, ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ರಂಗಭೂಮಿಯ ಮೇಲೆ ಅವನ ವಿರುದ್ಧ ಸೇಡು ತೀರಿಸಿಕೊಳ್ಳುವುದಿತ್ತು. ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡಕ್ಕೆ ಕಲಾವಿದರು ಒಳಗಾಗಿರುವ ಉದಾಹರಣೆಗಳು ಸಹ ಇವೆ ಎಂದಿದ್ದಾರೆ.

ಇಷ್ಟೇ ಅಲ್ಲದೆ ‘ಅಂದಿನ ಕಾಲದಲ್ಲಿ ಕಲಾವಿದರು ಮೇಳಕ್ಕೆಂದು ಹೋಗಿ ವಾಪಸಾಗುವ ಸಂದರ್ಭದಲ್ಲಿಯೂ ಹಲವರಿಗೆ ಮನೆಯೇ ಇರುತ್ತಿರಲಿಲ್ಲ. ಪ್ರವಾಹಕ್ಕೆ ಕೊಚ್ಚಿ ಹೋಗಿರುವ ಉದಾಹರಣೆಗಳು ಸಹ ಇವೆ. ಈ ರೀತಿಯ ದುರಂತ ಕಾವ್ಯಗಳು ಅವರ ಬದುಕಿನಲ್ಲಿವೆ. ಅವನ್ನು ಗ್ರಹಿಸುವ ಶಕ್ತಿ ಸಮಾಜಕ್ಕೆ ಇಲ್ಲ. ಹಾಡಿನ ಚಪ್ಪಾಳೆಯಷ್ಟೇ ಮುಖ್ಯವಾಗಲೇ ಬಾರದು. ಯಕ್ಷಗಾನ ಕಲಾವಿದರ ಬದುಕಿನ ಬಿಕ್ಕಟ್ಟಿನ ಕಾವ್ಯಕ್ಕೆ ಅಕ್ಷರಸ್ಥರು, ವಿದ್ವಾಂಸರು ದನಿಯಾಗಬೇಕು ಎಂದು ಅವರು ಹೇಳಿದ್ದಾರೆ.

Comments are closed.