Chikkamagalur: ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ಹಿನ್ನೆಲೆ ನಾಲ್ಕು ದಿನ ಪ್ರವಾಸಿಗರಿಗೆ ನಿರ್ಬಂಧ!

Share the Article

Chikkamagalur: ದತ್ತಜಯಂತಿ ಹಿನ್ನೆಲೆ ಡಿ.1ರಿಂದ 4ರವರೆಗೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಭಾಗಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಮುಳ್ಳಯ್ಯನಗಿರಿ, ದತ್ತಪೀಠ, ಸೀತಾಳಯ್ಯನಗಿರಿ, ಗಾಳಿಕೆರೆ ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 2, 3 ಹಾಗೂ 4ರಂದು ದತ್ತಪೀಠದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದ್ದು, ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್‌ ಆದೇಶ ಹೊರಡಿಸಿದ್ದಾರೆ.

ಡಿಸೆಂಬರ್ 5ರ ಬೆಳಗ್ಗೆ 10 ಗಂಟೆ ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ. ಇನ್ನೂ ವಿಶ್ವಹಿಂದೂ ಪರಿಷತ್‌, ಬಜರಂಗದಳದ ನೇತೃತ್ವದಲ್ಲಿ ದತ್ತಜಯಂತಿ ಸಂಭ್ರಮ ನಡೆಯಲಿದೆ. ದತ್ತ ಜಯಂತಿ ಹಿನ್ನೆಲೆ ಬಿಗಿ ಪೊಲೀಸ್‌ ಬಂದೋಬಸ್ತ್ ನಿಯೋಜನೆಗೂ ತಯಾರಿ ನಡೆದಿದೆ.

Comments are closed.