ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ನೋಂದಾಯಿಸಿಕೊಳ್ಳಲು ದಿನಾಂಕ ವಿಸ್ತರಣೆ

Share the Article

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಫೆಬ್ರವರಿ/ಮಾರ್ಚ್‌ 2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ.

2026 ರ ದ್ವಿತೀಯ ಪಿಯುಸಿ ಪರೀಕ್ಷೆ-1 ಕ್ಕೆ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಿಕೊಳ್ಳಲು ದಿನಾಂಕ 10-11-2025 ರವರೆಗೆ ರೂ.500 ದಂಡ ಶುಲ್ಕದೊಂದಿಗೆ ಅವಕಾಶ ನೀಡಲಾಗಿತ್ತು.

ಪೋಷಕರು ಹಾಗೂ ವಿದ್ಯಾರ್ಥಿಗಳ ದೂರವಾಣಿ ಕರೆಗಳ ಮೇರೆಗೆ ಸದರಿ ಪರೀಕ್ಷೆಗೆ ಶುಲ್ಕ ಪಾವತಿಸುವ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಣೆ ಮಾಡಿ ಆದೇಶಿಸಲಾಗಿದೆ.

ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಅಭ್ಯರ್ಥಿಗಳು ಸಲ್ಲಿಸಿ, ಶುಲ್ಕ ಪಾವತಿ ಮಾಡಲು ಕಡೆಯ ದಿನವನ್ನು 19-11-2025 ರಿಂದ 29-11-2025 ರವರೆಗೆ ವಿಸ್ತರಣೆ ಮಾಡಲಾಗಿದೆ.

ಜಿಲ್ಲಾ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರವರು ಪ್ರಾಂಶುಪಾಲರಿಂದ ಸ್ವೀಕರಿಸಿದ ಖಾಸಗಿ ಅಭ್ಯರ್ಥಿಗಳ ಅರ್ಜಿಗಳನ್ನು ಪರಿಶೀಲನೆ ಮಾಡಿ ತಮ್ಮ ಕಚೇರಿಯಲ್ಲಿಯೇ ಕಾಯ್ದಿರಿಸುವುದು ಹಾಗೂ ಅವಶ್ಯಕತೆ ಇದ್ದಲ್ಲಿ ಮಾತ್ರ ಮಂಡಳಿಯ ಪರಿಶೀಲನೆಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

Comments are closed.