Dog bite: ಬೀದಿ ನಾಯಿ ಕಡಿತದಿಂದ ವ್ಯಕ್ತಿ ಸತ್ತರೆ 5 ಲಕ್ಷ ಪರಿಹಾರ : ರಾಜ್ಯ ಸರ್ಕಾರ ಆದೇಶ

Share the Article

Dog bite: ಬೀದಿ ನಾಯಿ ಕಡಿತದಿಂದ ವ್ಯಕ್ತಿ ಮೃತಪಟ್ಟರೆ (Dog bite) 5 ಲಕ್ಷ ಪರಿಹಾರ (Compensation) ನೀಡಲಾಗುತ್ತದೆ ಎಂದು ರಾಜ್ಯದ ಸರ್ಕಾರ (karnataka government) ಮಹತ್ವದ ಆದೇಶ ಹೊರಡಿಸಿದೆ.

ಈ ಹಿಂದೆ ಇದ್ದ ಆದೇಶವನ್ನ ನಗರಾಭಿವೃದ್ಧಿ ಇಲಾಖೆ ತಿದ್ದುಪಡಿ ಮಾಡಿದೆ.ಇನ್ಮುಂದೆ ಯಾರಾದರೂ ಬೀದಿ ನಾಯಿ ಕಚ್ಚಿ ಸತ್ತರೆ 5 ಲಕ್ಷ ಪರಿಹಾರ ನೀಡಲಾಗುತ್ತದೆ. ಬೀದಿ ನಾಯಿ ಕಚ್ಚಿ ಗಾಯವಾದರೆ 5 ಸಾವಿರ ಪರಿಹಾರ ನೀಡಲಾಗುತ್ತದೆ. ಈಗಾಗಲೇ 3,500 ಗಾಯಾಳುಗಳಿಗೆ ಪರಿಹಾರ ನೀಡಲಾಗಿದೆ. ಆದರೆ, ಈ ನಿಯಮ ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ಅನ್ವಯ ಆಗಲಿದೆ.

ಈ ಹಿಂದಿನ ನಿಯಮ ಹೇಗಿತ್ತು?

ನಾಯಿ ಕಡಿತದಿಂದ ತರಚಿದ ಗಾಯವಾದರೆ ಪ್ರತಿ ಗಾಯಕ್ಕೆ 2 ಸಾವಿರ, ಆಳವಾದ ಗಾಯವಾದ ಗಾಯಕ್ಕೆ 3 ಸಾವಿರ, ಗಾಯಗಳ ಸಂಖ್ಯೆ ಹೆಚ್ಚಾಗಿದ್ದರೆ 10 ಸಾವಿರ ಪರಿಹಾರ ಹಾಗೂ ಬಿಬಿಎಂಪಿಯೇ ಚಿಕಿತ್ಸಾ ವೆಚ್ಚ ಭರಿಸುತ್ತಿತ್ತು. ಒಂದು ವೇಳೆ ನಾಯಿ ಕಚ್ಚಿ ಮಕ್ಕಳು ಅಸುನೀಗಿದರೆ 50 ಸಾವಿರ ಹಾಗೂ ವ್ಯಕ್ತಿ ಸಾವನಪ್ಪಿದರೆ 1 ಲಕ್ಷ ಪರಿಹಾರ ನೀಡಲಾಗುತ್ತಿತ್ತು. ಆದರೆ, ಈಗ ಆ ಮೊತ್ತವನ್ನು 5 ಲಕ್ಷಕ್ಕೆ ಹೆಚ್ಚಿಸಲಾಗಿದೆ.ಪರಿಹಾರ ಮೊತ್ತ ಪಡೆಯುವುದು ಹೇಗೆ?ಬೀದಿ ನಾಯಿ ದಾಳಿಗೆ ಒಳಗಾದ ಸಂತ್ರಸ್ತರಿಗೆ ಮಾತ್ರ ಜಿಬಿಎ ಪರಿಹಾರ ನೀಡಲಿದೆ. ನಿರ್ದಿಷ್ಟ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಜಿಬಿಎ ಪಶುಪಾಲನಾ ವಿಭಾಗಕ್ಕೆ ಸಲ್ಲಿಸಬೇಕು. ಅರ್ಜಿಯಲ್ಲಿ ಹೆಸರು, ವಯಸ್ಸು, ಫೋಟೋ, ವಿಳಾಸ, ನಾಯಿ ದಾಳಿ ನಡೆದ ಸ್ಥಳ, ವೈದ್ಯಕೀಯ ಚಿಕಿತ್ಸೆಯ ಸಂಪೂರ್ಣ ದಾಖಲೆಗಳ ವಿವರವನ್ನು ನಿಗದಿತ ಅವಧಿಯಲ್ಲಿ ನೀಡಬೇಕು. ಬಳಿಕ ಪಶುಪಾಲನಾ ವಿಭಾಗದ ಅಧಿಕಾರಿಗಳು ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ. ಅರ್ಜಿಯು ಜಿಬಿಎ ವೆಬ್‌ಸೈಟ್‌ನಲ್ಲಿ ಸಿಗುತ್ತದೆ.

Comments are closed.