OPS: ಹಳೆ ಪಿಂಚಣಿ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಗುಡ್ ನ್ಯೂಸ್ – ಈ ಸಾಲಿನಲ್ಲಿ ನೇಮಕವಾದವರು ಅರ್ಹರೆಂದ ಸರ್ಕಾರ

OPS: ಹಳೆ ಪಿಂಚಣಿ ಯೋಜನೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಗುಡ್ ನ್ಯೂಸ್ ನೀಡಿದ್ದು, ಈ ಸಾಲಿನಲ್ಲಿ ನೇಮಕವಾದವರು ಹಳೆ ಪಿಂಚಣಿ ಯೋಜನೆಗೆ ಅರ್ಹರೆಂದು ತಿಳಿಸಿದೆ.

ಹೌದು, ರಾಜ್ಯದ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಲು 01-04-2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ಶಿಕ್ಷಕರುಗಳನ್ನು ಹಳೆಯ ಡಿಫ್ರೆಂಡ್ ಪಿಂಚಣಿ ಸೌಲಭ್ಯಕ್ಕೆ ಅರ್ಹರು ಎಂಬುದಾಗಿ ಹೇಳಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ದಿನಾಂಕ: 01-04-2006 ರ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಿಂದ ಅಥವಾ ನಂತರದಲ್ಲಿ ಸೇವೆಗೆ ಸೇರಿದ ಶಿಕ್ಷಕರುಗಳನ್ನು ಹಳೆಯ ಡಿಫ್ರೆಂಡ್ ಪಿಂಚಣಿ ಸೌಲಭ್ಯಕ್ಕೆ ಒಳಪಡಿಸುವ ಸಂಬಂಧ, ನಮೂನೆ-01 ಮತ್ತು ನಮೂನೆ-02 ರಲ್ಲಿ ಮಾಹಿತಿಯನ್ನು ಸಿದ್ಧಪಡಿಸಿ ಈ ಕಛೇರಿಗೆ ಸಲ್ಲಿಸಿರುತ್ತಾರೆ. ಸದರಿ ಮಾಹಿತಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಲಾಗಿದೆ ಎಂದಿದ್ದಾರೆ. ಈ ಸಂಬಂಧ ದೃಡೀಕರಣ ಪತ್ರವನ್ನು ಸಲ್ಲಿಸಲು ಸೂಚಿಸಲಾಗಿದ್ದು, ಅದರಂತೆ ಬೆಂಗಳೂರು ಮತ್ತು ಮೈಸೂರು ವಿಭಾಗದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹಿಂದಿನ ಡಿಫೈನ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ದೃಢೀಕರಿಸಿ ಎಂದು ಹೇಳಿದ್ದಾರೆ.
Comments are closed.