KEA: 973 ಹುದ್ದೆ ನೇಮಕಕ್ಕೆ ಲಿಖಿತ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ, ವಿವರ ಇಲ್ಲಿದೆ

Share the Article

KEA Recruitment: ಅಕ್ಟೋಬರ್‌, ನವೆಂಬರ್‌ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ವಿವಿಧ ಇಲಾಖೆ/ನಿಗಮಗಳಲ್ಲಿನ 973 ಖಾಲಿ ಹುದ್ದೆಗಳ ನೇಮಕಾತಿ ಕುರಿತು ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವೇಳಾಪಟ್ಟಿ ಪ್ರಕಟ ಮಾಡಿದೆ.

ತಾಂತ್ರಿಕ ಶಿಕ್ಷಣ, ಕೃಷಿ ಮಾರಾಟ‌, ಬಿಡಿಎ, ಬೆಂಗಳೂರು ಜಲಮಂಡಳಿ, ಕೆಎಸ್ ಡಿ ಎಲ್, ಕೆಕೆಆರ್ ಟಿಸಿ, ಆರ್ ಜಿಯುಎಚ್ಎಸ್, ಕೆಎಸ್ಎಸ್ಐಡಿಸಿ, ಶಾಲಾ ಶಿಕ್ಷಣ ಇತ್ಯಾದಿ ಇಲಾಖೆ/ನಿಗಮ- ಮಂಡಳಿಗಳ ವಿವಿಧ ದರ್ಜೆಯ ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗುತ್ತದೆ.

ಹೈದರಾಬಾದ್ ಕರ್ನಾಟಕ ಕೋಟಾ(ಎಚ್‌ಕೆ) ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಡಿ.20, 21, ಜ.24 ಮತ್ತು ಫೆ.22ರಂದು ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 391 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿದೆ. ಹೈದರಾಬಾದ್ ಕರ್ನಾಟಕ ಕೋಟಾ ಕ್ಲೇಮ್ ಮಾಡದವರಿಗೆ (ನಾನ್ ಎಚ್‌ಕೆ) ಜ.10, 11, 12 ಮತ್ತು 25ರಂದು ವಿವಿಧ ಪರೀಕ್ಷೆಗಳು ನಡೆಯಲಿವೆ. ಇದರಲ್ಲಿ 582 ಹುದ್ದೆಗಳಿಗೆ ಪರೀಕ್ಷೆ ನಡೆಯಲಿದೆ. ಎಚ್‌ಕೆ ಹಾಗೂ ನಾನ್-ಎಚ್‌ಕೆ-ಎರಡೂ ಪರೀಕ್ಷೆಗಳಲ್ಲಿ ಋಣಾತ್ಮಕ ಮೌಲ್ಯಮಾಪನ ಇರುತ್ತದೆ. ಪ್ರತಿ ತಪ್ಪು ಉತ್ತರಕ್ಕೆ 1/4 ಅಂಕ ಕಡಿತ ಮಾಡಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments are closed.