BJP: ಕೊಲೆಯತ್ನ ಆರೋಪ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್

BJP: ಕೊಲೆಯತ್ನ ಆರೋಪದಡಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ (Manikanta Rathod) ಅವರನ್ನು ನೆಲೋಗಿ ಠಾಣೆ ಪೊಲೀಸರು (Nelogi Police) ಬಂಧಿಸಿದ್ದಾರೆ.

ಕಲಬುರಗಿ (Kalaburagi) ಜಿಲ್ಲೆ ಅಫಜಲಪುರ ತಾಲೂಕಿನ ಮಾಶಾಳ ಗ್ರಾಮದ ಬಳಿ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ. ಗುರುವಾರ ತಡರಾತ್ರಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜೇವರ್ಗಿ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಾಟಿ ಔಷಧಿ ಕೊಡುತ್ತಿದ್ದ ರಶೀದ್ ಮತ್ಯಾ ಬಂಧನಕ್ಕೆ ಮಣಿಕಂಠ ರಾಠೋಡ್ ಆಗ್ರಹಿಸಿದ್ದರು. ಅಲ್ಲದೇ ಬೆಂಬಲಿಗರೊಂದಿಗೆ ಗ್ರಾಮಕ್ಕೆ ತೆರಳಿ ದೊಡ್ಡ ಹೈಡ್ರಾಮ ಕ್ರಿಯೇಟ್ ಮಾಡಿದ್ದರು. ಈ ವೇಳೆ ರಶೀದ್ ಮತ್ಯಾ ಕಾರು ಚಾಲಕನ ತಲೆಗೆ ಕಲ್ಲೇಟು ಬಿದ್ದಿತ್ತು. ಸದ್ಯ ರಶೀದ್ ಮುತ್ಯಾ ಚಾಲಕನ ದೂರಿನ ಮೇರೆಗೆ ಮಣಿಕಂಠ ರಾಠೋಡ್ ಅವರನ್ನು ಬಂಧಿಸಲಾಗಿದೆ. ಕೊಲೆಯತ್ನ ಆರೋಪದಡಿ ದೂರು ದಾಖಲಿಸಲಾಗಿದೆ. ನೆಲೋಗಿ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ದಾಖಲಾದ ಬೆನ್ನಲ್ಲೇ ಪೊಲೀಸರು ಮಣಿಕಂಠ ಅವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
Comments are closed.