Mangaluru: ತುಳು ಶಿಕ್ಷಕರ ಪ್ರೋತ್ಸಾಹಧನ ಬಿಡುಗಡೆ

Share the Article

Mangaluru: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ತುಳು ಪಠ್ಯವನ್ನು ಬೋಧಿಸುವ ಶಿಕ್ಷಕರ 2024-25 ನೇ ಸಾಲಿನ ಪ್ರೋತ್ಸಾಹ ಧನ ರೂ.10.00 ಲಕ್ಷ ಬಿಡುಗಡೆ ಮಾಡಲಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ತಿಳಿಸಿದ್ದಾರೆ.‌ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ 31 ಸರ್ಕಾರಿ,ಖಾಸಗಿ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ (ಸ್ಟೇಟ್ ಸಿಲೆಬಸ್) ತುಳು ಬೋಧಿಸುವ ಶಿಕ್ಷಕರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಈ ಅನುದಾನವನ್ನು ಒದಗಿಸಲಾಗಿದೆ.ಶಾಲೆಗಳಲ್ಲಿ ತುಳು ಕಲಿಕಾ ಕಾರ್ಯಕ್ರಮ ಯೋಜನೆಯನ್ವಯ ಅಕಾಡೆಮಿಯ ವಾರ್ಷಿಕ ಅನುದಾನದಿಂದ ಈ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.ತುಳು ಶಿಕ್ಷಕರ ಪ್ರೋತ್ಸಾಹ ಧನ ಬಿಡುಗಡೆಗೆ ಅನುಮೋದನೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹಾಗೂ ಇಲಾಖೆಯ ನಿರ್ದೇಶಕಿ ಕೆ.ಎಂ ಗಾಯತ್ರಿ ಅವರಿಗೆ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅವರು ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.2010ರ ಬಳಿಕ ಶಾಲೆಗಳಲ್ಲಿ ತೃತೀಯ ಭಾಷೆಯಾಗಿ ತುಳು ಪಠ್ಯ ಬೋಧಿಸಲಾಗುತ್ತಿದೆ. ಕಳೆದ ಬಾರಿ 847 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ತರಗತಿಯಲ್ಲಿ ತುಳು ಪಠ್ಯವನ್ನು ಆಯ್ಕೆ ಮಾಡಿಕೊಂಡು ಪರೀಕ್ಷೆ ಬರೆದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು ಎಂದು ತಾರಾನಾಥ ಗಟ್ಟಿ ಕಾಪಿಕಾಡ್ ಅವರು ತಿಳಿಸಿದ್ದಾರೆ.

Comments are closed.