Mangaluru: ಸುರತ್ಕಲ್ – ನಂತೂರು – ಬಿಸಿ ರೋಡ್ ಹೆದ್ದಾರಿ ವ್ಯಾಪ್ತಿ ಎನ್ಎಚ್ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ

Mangaluru: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಅನುಮೋದನೆ ನೀಡಿದೆ.

ಹೆದ್ದಾರಿ ಪ್ರಾಧಿಕಾರದ ಈ ಮಹತ್ವದ ನಿರ್ಧಾರದಿಂದಾಗಿ ಮಂಗಳೂರಿನ ಅತ್ಯಂತ ನಿರ್ಣಾಯಕ ರಸ್ತೆ ಕಾರಿಡಾರ್ಗಳಲ್ಲಿ ಒಂದಾದ ಸುರತ್ಕಲ್-ನಂತೂರು-ಬಿಸಿ.ರೋಡ್ ಹೆದ್ದಾರಿಯ ಸಮರ್ಪಕ ನಿರ್ವಹಣೆ ಮತ್ತು ಸುಧಾರಣೆಗೆ ಕಾಯಕಲ್ಪ ದೊರೆಯುವ ಮೂಲಕ ಈ ಗಂಭೀರ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ.ಸಂಸದ ಕ್ಯಾ. ಚೌಟ ಅವರ ಸತತ ಪ್ರಯತ್ನದ ಫಲವಾಗಿ ಹೆದ್ದಾರಿ ಸಚಿವಾಲಯವು ಸುರತ್ಕಲ್ನಿಂದ ಬಿಸಿ ರೋಡ್ವರೆಗಿನ ಬಂದರು ಸಂಪರ್ಕ ರಸ್ತೆಯನ್ನು ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಹಸ್ತಾಂತರಿಸಿ ಆದೇಶ ಮಾಡಿದೆ.
ಈ ಬಗ್ಗೆ ಹೆದ್ದಾರಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿರುವ ಸಚಿವಾಲಯವು, ಆದಷ್ಟು ಬೇಗ ಸುರತ್ಕಲ್-ಬಿಸಿರೋಡ್ ಹೆದ್ದಾರಿ ಸುಧಾರಣೆ ಹಾಗೂ ರಸ್ತೆ ಸುರಕ್ಷತೆ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ವಿಸೃತ್ತ ಯೋಜನಾ ವರದಿ(ಡಿಪಿಆರ್) ತಯಾರಿಸುವಂತೆ ಸೂಚಿಸಿದೆ. ಅಲ್ಲದೆ, ಕಳೆದ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಈ ಕಾರಿಡಾರ್ನಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಎದುರಾಗಿರುವ ಅಡೆ-ತಡೆ, ಸವಾಲು ಹಾಗೂ ಬಲವರ್ಧನೆಗೆ ಕ್ರಮ ಕೈಗೊಳ್ಳುವ ಮೂಲಕ ಶಾಶ್ವತ ಪರಿಹಾರ ಒದಗಿಸುವಂತೆ ಸೂಚಿಸಿದೆ.
Comments are closed.