Karnataka Gvt : ಪುರುಷರಿಗೆ ಮಕ್ಕಳಾಗದಂತೆ ಆಪರೇಷನ್ ಮಾಡಿಸಲು ಮುಂದಾದ ರಾಜ್ಯ ಸರ್ಕಾರ!!

Share the Article

Karnataka Gvt : ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದಲ್ಲಿ ಜನಸಂಖ್ಯಾ ಪ್ರಮಾಣ ಗಣನೀಯವಾಗಿ ಇಳಿಕೆಗೆ ಕಾರಣವಾದ ಪುರುಷರ ಸಂತಾನ ವಿರೋಧ ಶಸ್ತ್ರ ಚಿಕಿತ್ಸೆ ಅಭಿಯಾನಕ್ಕೆ ಕರ್ನಾಟಕದ ಸರ್ಕಾರ ಮುಂದಾಗಿದೆ. ಈ ಬಗ್ಗೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಹೌದು, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಪುರುಷ ಸಂತಾನ ನಿರೋಧ ಶಸ್ತ್ರ ಚಿಕಿತ್ಸೆ ಅಭಿಯಾನಕ್ಕೆ ಮುಂದಾಗಿದೆ. ಈಗಾಗಲೇ ದೇಶದ ವಿವಿಧ ರಾಜ್ಯಗಳು ಈ ಅಭಿಯಾನಕ್ಕೆ ಚಾಲನೆ ನೀಡಿವೆ. ಇದೀಗ ಕರ್ನಾಟಕ ಸರ್ಕಾರ ಕೂಡ ಈ ಹಾದಿಯಲ್ಲಿ ಹೆಜ್ಜೆ ಇಟ್ಟಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಪುರುಷ ಸಂತಾನ ನಿರೋಧ ಶಸ್ತ್ರಚಿಕಿತ್ಸೆ ಎನ್ನುವುದು ಎನ್‌ಎಸ್‌ವಿ (ನೋ-ಸ್ಟಾಸ್ಟೆಲ್ ವ್ಯಾಸೆಕ್ಟಮಿ) ಶಾಶ್ವತ ಗರ್ಭನಿರೋಧಕ್ಕಾಗಿ ಒಂದು ಸರಳ ಹೊಲಿಗೆ ರಹಿತ ಮತ್ತು ಸುರಕ್ಷಿತ ವಿಧಾನವಾಗಿದೆ. ಸಾಂಪ್ರದಾಯಿಕ ಮಾದರಿಗೆ ಹೋಲಿಸಿದರೆ ಯಾವುದೇ ರೀತಿಯ ಕತ್ತರಿಸುವ (ಇನ್ಸಿಷನ್) ಅಗತ್ಯವಿರುವುದಿಲ್ಲ. ರಕ್ತಸ್ರಾವ, ಹೆಮೆಟೋಮ, ಸೋಂಕು, ನೋವಿನ ಪ್ರಮಾಣವು ಕಡಿಮೆ ಇರುತ್ತದೆ. ಅಲ್ಲದೇ ಅಲ್ಪ ಸಮಯದಲ್ಲೇ ಚೇತರಿಕೆಯ ಪ್ರಯೋಜನವನ್ನು ಹೊಂದುವ ವಿನೂತನ ಚಿಕಿತ್ಸೆ ಇದಾಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಆರೋಗ್ಯ ಇಲಾಖೆಯು ಜಾಗೃತಿ ಮೂಡಿಸುತ್ತಿದೆ. ಕುಟುಂಬ ಯೋಜನೆಯನ್ನು ಅಳವಡಿಸಿಕೊಳ್ಳುವ ಪುರುಷರು, ಸಂತೋಷದ ಕುಟುಂಬಕ್ಕೆ ಅಡಿಪಾಯ ಹಾಕುತ್ತಾರೆ. ನಿಮ್ಮ ಆರೋಗ್ಯ, ನಮ್ಮ ಆದ್ಯತೆ ಎಂದು ಜಾಗೃತಿ ಮೂಡಿಸುತ್ತಿದೆ. ಆದರೆ ಇದಕ್ಕೆ ಸಾರ್ವಜನಿಕರಿಂದ ಮಿಶ್ರ ಪ್ರತಿಕ್ರಿಯೆ ಬರುತ್ತಿದೆ.

Comments are closed.