ಯುಜಿ ಆಯುಷ್‌ 2ನೇ ಸ್ಟ್ರೇವೇಕೆನ್ಸಿ ಸುತ್ತಿನ ಸೀಟು ಹಂಚಿಕೆ: ಕೆಇಎ

Share the Article

ಕೆಇಎ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು, ಯುಜಿ ಆಯುಷ್ ಕೋರ್ಸ್‌ಗಳ (PG AYUSH Course) ಎರಡನೇ ಸ್ಟ್ರೇ ವೇಕೆನ್ಸಿ ಸುತ್ತಿನ ಸೀಟು ಹಂಚಿಕೆ ಆರಂಭ ಮಾಡಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.27ರಂದು ಬೆಳಿಗ್ಗೆ 10 ಗಂಟೆಯವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ನ.27ರಂದು ಮಧ್ಯಾಹ್ನ 2 ಗಂಟೆ ನಂತರ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುತ್ತದೆ. ನ.28ರಂದು ಬೆಳಿಗ್ಗೆ 10 ಗಂಟೆ ನಂತರ ಅಂತಿಮ ಫಲಿತಾಂಶ ಪ್ರಕಟಿಸಲಾಗುತ್ತದೆ. ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ನ.30ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇವಾ ನಿರತ ವೈದ್ಯರಿಗೆ ಡಿಎನ್ ಬಿ/ಡಿಪ್ಲೊಮಾ ಕೋರ್ಸ್‌ಗಳ ಸೀಟು ಮ್ಯಾಟ್ರಿಕ್ಸ್ ಪ್ರಕಟಿಸಿದ್ದು, ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ನ.26ರಂದು ಬೆಳಿಗ್ಗೆ 10 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ನೋಡಲು ಕೋರಲಾಗಿದೆ.

Comments are closed.