Delhi: ಕರ್ನಾಟಕ ರಾಜಕೀಯ ಬಗ್ಗೆ ದೆಹಲಿಯಲ್ಲಿ ಹೈ ವೋಲ್ಟೇಜ್ ಸಭೆ – ಘಟಾನುಘಟಿ ನಾಯಕರು ಭಾಗಿ !!

Delhi: ಕರ್ನಾಟಕದಲ್ಲಿ ಮುಖ್ಯಮಂತ್ರಿ ಕುರ್ಚಿ ಕುರಿತಾ ಪೈಪೋಟಿ ವಿಚಾರ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿ ತುಂಬಾ ದಿನಗಳೆ ಕಳೆದಿವೆ. ಆದರೆ ಇದೀಗ ಈ ಸಮಸ್ಯೆ ಬಗೆ ಹರಿಸಲು ಇಂದು ಕಾಲ ಕೂಡಿಬಂದಂತೆ ಕಾಣುತ್ತಿದೆ. ಕಾರಣ ಇಂದು ದೆಹಲಿಯಲ್ಲಿ ಕರ್ನಾಟಕ ರಾಜಕೀಯ ಕುರಿತು ಹೈ ವೋಲ್ಟ ಸಭೆ ನಡೆಯುತ್ತಿದೆ.

ಹೌದು, ಕಾಂಗ್ರೆಸ್ ಹೈಕಮಾಂಡ್ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಸಭೆ ಕರೆದಿದ್ದು ಈ ಸಭೆಯಲ್ಲಿ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರು ಕೂಡ ಭಾಗವಹಿಸಲಿದ್ದು, ಇಬ್ಬರು ಘಟಾನುಘಟ್ಟ ನಾಯಕರು ಮುಖಾಮುಖಿಯಾಗಲಿದ್ದಾರೆ.
ಈ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ, ಕೆ ಸಿ ವೇಣುಗೋಪಾಲ್, ಸುರ್ಜೆವಾಲಾ ಸೇರಿದಂತೆ ಇದರ ಕೆಲವು ನಾಯಕರು ಕೂಡ ಪಾಲ್ಗೊಳ್ಳಲಿದ್ದಾರೆ. ಈ ಸಭೆಯಲ್ಲಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರ ನಡುವೆ ಸಂದಾನ ನಡೆಸುವ ಪ್ಲಾನ್ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ಈ ಸಭೆಯಲ್ಲಿ ಎಲ್ಲಾ ರೀತಿಯ ಅಂತಿಮ ತೀರ್ಮಾನಗಳನ್ನು ಕೈಗೊಳ್ಳಲು ಚಿಂತನೆ ನಡೆಸಿದೆ ಎನ್ನಲಾಗಿದೆ ಅಲ್ಲದೆ ಸಭೆಯಲ್ಲಿ ಡಿಕೆ ಶಿವಕುಮಾರ್ ಗೆ ಅಧಿಕಾರ ಹಂಚಿಕೆಯಾಗುತ್ತಾ ಅಥವಾ ಸಿದ್ದರಾಮಯ್ಯ ಕೇಳಿದಂತೆ ಸಂಪುಟ ಪುನರ್ ರಚನೆಗೆ ಗ್ರೀನ್ ಸಿಗ್ನಲ್ ದೊರೆಯುತ್ತಾ? ಎಂಬುದನ್ನು ಕಾದು ನೋಡಬೇಕಿದೆ.
Comments are closed.