Karnataka Gvt : ಪ್ರೌಢಶಾಲಾ ಶಿಕ್ಷಕರಿಗೆ ಶಾಕ್- ಬಡ್ತಿ ನೀಡಲು ‘ಅರ್ಹತಾ ಪರೀಕ್ಷೆ’ ನಿಗದಿ ಪಡಿಸಿ ರಾಜ್ಯ ಸರ್ಕಾರ ಆದೇಶ

Share the Article

Karnataka Gvt: ಬಡ್ತಿಗಾಗಿ ಎದುರು ನೋಡುತ್ತಿದ್ದ ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರವು ಶಾಕ್ ನೀಡಿದ್ದು, ಇನ್ನು ಮುಂದೆ ರಾಜ್ಯದ ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ ನೀಡಲು ಅರ್ಹತಾ ಪರೀಕ್ಷೆ ನಿಗದಿಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ..

ಹೌದು, ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹ ಶಿಕ್ಷಕರು ಪ್ರಸ್ತುತ ಬೋಧನಾ ವಿಷಯದ ಸ್ನಾತಕೋತ್ತರ ಪದವಿಯಲ್ಲಿ ಶೇ. 50 ರಷ್ಟು ಅಂಕಗಳನ್ನು ಪಡೆದಿರುವ ಅಥವಾ ಪದವಿ ಹಂತದಲ್ಲಿ ಅಧ್ಯಯನ ಮಾಡಿದ ಯಾವುದಾದರೂ ಐಚ್ಛಿಕ ವಿಷಯದ ಸ್ನಾತಕೋತ್ತರ ಪದವಿಯಲ್ಲಿ ಶೇ. 50 ರಷ್ಟು ಅಂಕಗಳನ್ನು ಪಡೆದಿರುವ ಹಾಗೂ ಕನಿಷ್ಠ 10 ವರ್ಷಗಳ ಸೇವಾವಧಿಯನ್ನು ಪೂರ್ಣಗೊಳಿಸಿರುವ ಸಹ ಶಿಕ್ಷಕರು ಲಭ್ಯವಿಲ್ಲದಿದ್ದಲ್ಲಿ 07 ವರ್ಷಗಳ ಸೇವಾವಧಿ ಪೂರ್ಣಗೊಳಿಸಿರುವ ಸಹ ಶಿಕ್ಷಕರುಗಳು ಬಿ.ಇಡಿ ಪದವಿಯನ್ನು ಹೊಂದಿರತಕ್ಕದು ಹಾಗೂ ಮುಂಬಡ್ತಿ ನೀಡಿರುವ ಹುದ್ದೆಗಳಿಗೆ ಅರ್ಹರಿರುವ ಸಹ ಶಿಕ್ಷಕರುಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಅರ್ಹತಾ ಪರೀಕ್ಷೆಯನ್ನು ನಿಗದಿಪಡಿಸಲು ಆದೇಶಿಸಲಾಗಿದೆ.

Comments are closed.