ಉಡುಪಿ: ಶ್ರೀಕೃಷ್ಣನ ದರ್ಶನ ಪಡೆದು 4 ಸಂಕಲ್ಪಕ್ಕೆ ಕರೆ ಕೊಟ್ಟ ಮೋದಿ

ಉಡುಪಿ: ಕನಕದಾಸರಿಗೆ ನಮಿಸುವ ಪುಣ್ಯ ಇಂದು ನನಗೆ ದೊರಕಿದ್ದು, ನನ್ನಂಥ ಎಲ್ಲಾ ಭಕ್ತರಿಗೂ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಆಗುವಂತೆ ಮಾಡಿದ್ದು ಕನಕದಾಸರು. ಕೆಲವೊಂದು ಸಂಕಲ್ಪವನ್ನು ಮಾಡಲಾಗಿದೆ. ನಮ್ಮ ಮೊದಲ ಸಂಕಲ್ಪ ನೀರು ನದಿಯ ರಕ್ಷಿಸೋದು, ಒಬ್ಬ ಬಡವನ ಉದ್ಧಾರ ಮಾಡಲು ಪ್ರಯತ್ನಿಸೋಣ. ಉತ್ತಮ ಆರೋಗ್ಯ, ಯೋಗ ಸಂಕಲ್ಪ ಮಾಡೋಣ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದರು.

ನನ್ನ ಜನ್ಮ ಗುಜರಾತ್‌ನಲ್ಲಿ ಆಗಿದ್ದು. ಆದರೂ ಗುಜರಾತ್ ಮತ್ತು ಉಡುಪಿಗೆ ಅವಿನಾಭಾವ ಸಂಬಂಧವಿದೆ. ಉಡುಪಿ ಕೃಷ್ಣನ ದರ್ಶನ ಪಡೆದಿದ್ದು, ಆಧ್ಯಾತ್ಮಿಕ ಖುಷಿ ದೊರಕಿದಂತಾಗಿದೆ. ಲಕ್ಷ ಕಂಠದ ಮೂಲಕ ಗೀತಾ ಪಠಣ ಒಂದೇ ಸ್ಥಳದಲ್ಲಿ ಒಂದೇ ವೇಳೆ ಆಗಿರುವುದು ಹೊಸ ಶಕ್ತಿ ನೀಡಿದಂತಾಗಿದೆ. ಈ ಕೆಲಸ ಮಾಡಿರೋ ಸುಗಣೇಂದ್ರ ಶ್ರೀಗಳಿಗೆ ಪ್ರಣಾಮ ಸಲ್ಲಿಸುತ್ತೇನೆ ಎಂದರಲ್ಲದೇ ಉಡುಪಿಯು ಜನ ಸಂಘ ಹಾಗೂ ಬಿಜೆಪಿಯ ಕರ್ಮಭೂಮಿ. ಜನ ಸಂಘದಲ್ಲಿ ನಮ್ಮ ವಿ.ಎಸ್.ಆಚಾರ್ಯರನ್ನು ಆಯ್ಕೆ ಮಾಡಿದ್ದು ಉಡುಪಿಯ ಜನ ಎಂದು ಮೂರು ದಿನಗಳ ಹಿಂದೆ ನಾನು ಅಯೋಧ್ಯೆಯಲ್ಲಿದ್ದೆ. ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಧರ್ಮಧ್ವಜ ಸ್ಥಾಪನೆ ಆಗಿದೆ. ಅಯೋಧ್ಯೆಯಿಂದ ಉಡುಪಿಯವರೆಗೂ ರಾಮ ಭಕ್ತರು ಸಾಕ್ಷಿಯಾಗಿದ್ದಾರೆ. ಮಧ್ವಾಚಾರ್ಯರು ಭಕ್ತಿಯ ಮಾರ್ಗ ತೋರಿಸಿಕೊಟ್ಟಿದ್ದಾರೆ. ಅವರ ಮಾರ್ಗದರ್ಶನದಿಂದ ಆರಂಭಗೊಂಡ ಈ ಅಷ್ಟ ಮಠಗಳು ಇಂದಿಗೂ ಧರ್ಮಕಾರ್ಯದಲ್ಲಿ ತೊಡಗಿವೆ ಎಂದು ಶ್ಲಾಘಿಸಿದರು ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ.
Comments are closed.