National Herald Case: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್, ಸೋನಿಯಾ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌

Share the Article

National Herald Case: ನ್ಯಾಷನಲ್‌ ಹೆರಾಲ್ಡ್‌ ಹಣ ವರ್ಗಾವಣೆ ಪ್ರಕರಣದಲ್ಲಿ (National Herald Case) ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಹೊಸ ಎಫ್‌ಐಆರ್‌ (FIR) ದಾಖಲಿಸಲಾಗಿದೆ.ದೆಹಲಿ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು (EOW) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ (Sonia Gandhi) ವಿರುದ್ಧ ಕ್ರಿಮಿನಲ್ ಪಿತೂರಿ ಆರೋಪದ ಮೇಲೆ ಹೊಸ ಎಫ್‌ಐಆರ್ ದಾಖಲಿಸಿದೆ.

ಸೋನಿಯಾ, ರಾಹುಲ್‌ ಜೊತೆಗೆ ಇತರ 6 ವ್ಯಕ್ತಿಗಳು ಹಾಗೂ ಮೂರು ಕಂಪನಿಗಳನ್ನು ಸಹ ಎಫ್‌ಐಆರ್‌ನಲ್ಲಿ ಆರೋಪಿಗಳಾಗಿ ಹೆಸರಿಸಲಾಗಿದೆ.

ಎಫ್‌ಐಆರ್‌ನಲ್ಲಿ ಏನಿದೆ?

ಎಫ್‌ಐಆರ್ ಉಲ್ಲೇಖಿಸಿರುವ ಪ್ರಕಾರ, ಕಾಂಗ್ರೆಸ್‌ಗೆ ಸಂಬಂಧಿಸಿದ ಕಂಪನಿಯಾದ ಎಜೆಎಲ್ (ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್) ಅನ್ನು ವಂಚನೆಯಿಂದ ಸ್ವಾಧೀನಪಡಿಸಿಕೊಳ್ಳಲು ಕ್ರಿಮಿನಲ್ ಪಿತೂರಿ ರೂಪಿಸಲಾಗಿದೆ ಎಂದು ಆರೋಪಿಸಲಾಗಿದೆ. ಜಾರಿ ನಿರ್ದೇಶನಾಲಯದ (ಇಡಿ) ದೂರಿನ ಆಧಾರದ ಮೇಲೆ ಅಕ್ಟೋಬರ್ 3 ರಂದು ಈ ಎಫ್‌ಐಆರ್ ದಾಖಲಿಸಲಾಗಿದೆ. ಇಡಿ ತನ್ನ ತನಿಖಾ ವರದಿಯನ್ನ ದೆಹಲಿ ಪೊಲೀಸರೊಂದಿಗೆ ಹಂಚಿಕೊಂಡಿದೆ.

Comments are closed.