Madhu Bangarappa : ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲೇ 18,000 ಶಿಕ್ಷಕರ ನೇಮಕ- ಕೊನೆಗೂ ಭರವಸೆ ಈಡೇರಿಸಲು ಮುಹೂರ್ತ ಫಿಕ್ಸ್ ಮಾಡಿದ ಮಧು ಬಂಗಾರಪ್ಪ !!

Madhu Bangarappa: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಕರ ನೇಮಕಾತಿ ವಿಚಾರವಾಗಿ ಆಗಾಗ ಹೇಳಿಕೆಗಳನ್ನು ನೀಡುತ್ತಾ, ಸದ್ಯದಲ್ಲಿ 6,000 ಶಿಕ್ಷಕರ ನೇಮಕ, 12,000 ಶಿಕ್ಷಕರ ನೇಮಕ, 16,000 ಶಿಕ್ಷಕರ ನೇಮಕ ಎಂದು ಇದುವರೆಗೂ ಬರಿ ಭರವಸೆಗಳನ್ನು ನೀಡುತ್ತಾ ಬಂದಿದ್ದಾರೆ. ಆದರೆ ಇದೀಗ ಅಂತಿಮವಾಗಿ ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿರುವ ಮಧು ಬಂಗಾರಪ್ಪ ಅವರು ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ 18000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಘೋಷಣೆ ಮಾಡಿದ್ದಾರೆ.

ಹೌದು, ಶಿವಮೊಗ್ಗದಲ್ಲಿ ಇಂದು (ನವೆಂಬರ್ 29) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೀಘ್ರದಲ್ಲೇ ಸರ್ಕಾರಿ ಶಾಲೆಗಳಿಗೆ 12,000 ಮತ್ತು ಅನುದಾನಿತ ಶಾಲೆಗಳಿಗೆ 6,000 ಸೇರಿ ಒಟ್ಟು 18,000 ಶಿಕ್ಷಕರನ್ನ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಎಂದು ಹೇಳಿದ್ದಾರೆ ರಾಜ್ಯದಲ್ಲಿ ಯಾವುದೇ ಶಿಕ್ಷಕರ ಕೊರತೆ ಆಗದಂತೆ ನೋಡಿಕೊಳ್ಳಲಾಗುವುದು. ಮುಂದಿನ ಶೈಕ್ಷಣಿಕ ವರ್ಚದಲ್ಲಿ ಮಕ್ಕಳ ಸ್ವಾಗತಕ್ಕೆ ಈಗ ನೇಮಕ ಮಾಡಿಕೊಳ್ಳುವ ಶಿಕ್ಷಕರೇ ಉಪಸ್ಥಿತರಿರುತ್ತಾರೆ. ನಾವೂ ಒಟ್ಟು 32 ಸಾವಿರ ಶಿಕ್ಷಕರ ನೇಮಕ ಮಾಡಿದಂತೆ ಆಗುತ್ತದೆ. ವಿದ್ಯಾರ್ಥಿಗಳ ಉತ್ತಮ ಫಲಿತಾಂಶಕ್ಕೆ ಇಲಾಖೆ ಸಹ ಸಹಕಾರ ಮಾಡಬೇಕಾಗುತ್ತದೆ. ಈ ನಿಟ್ಟಿನಲ್ಲಿ ಪ್ರಾಂಶುಪಾಲರು, ಉಪಪ್ರಾಂಶುಪಾಲರ ಕಾರ್ಯಾಗಾರ ನಡೆಸಲಾಗುತ್ತಿದೆ.
Comments are closed.