Belagavi: ಬಸವ ತತ್ವದ ಕೆಲ ಸ್ವಾಮೀಜಿಗಳು ತಾಲಿಬಾನಿಗಳು – ಕಾಡ ಸಿದ್ದೇಶ್ವರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ

Share the Article

Belagavi: ಬಸವ ತತ್ವವನ್ನು ಪಾಲಿಸುವ ಸ್ವಾಮೀಜಿಗಳು ತಾಲಿಬಾನಿಗಳು ಎಂಬುದಾಗಿ ಕಾಡ ಸಿದ್ದೇಶ್ವರ ಸ್ವಾಮೀಜಿ ಹೇಳಿಕೆಯನ್ನು ನೀಡಿದ್ದಾರೆ. ಇದು ರಾಜ್ಯದ್ಯಂತ ಭಾರಿ ಅಕ್ರೋಶಕ್ಕೆ ಕಾರಣವಾಗಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ನಡೆದ ಹನುಮ ಮಾಲಾ ದೀಕ್ಷಾ ಕಾರ್ಯಕ್ರಮದಲ್ಲಿ ಹನುಮ ಮಾಲಾಧಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಹನುಮ ಮಾಲೆ ಹಾಕಿಕೊಳ್ಳುವವರು ಯಾವಾಗಲೂ ಯಾರಿಗೂ ಕೆಟ್ಟದ್ದು ಮಾಡುವವರಲ್ಲ. ಯಾರನ್ನೂ ತಪ್ಪು ದಾರಿಗೆ ಕೂಡ ಕರೆದೊಯ್ಯುವುದಿಲ್ಲ. ಹನುಮ ಮಾಲೆಯ ಕುರಿತು ಕೆಲವರು ಟೀಕೆ ಮಾಡಬಹುದು, ಕಮ್ಯುನಿಸ್ಟ್ ರು ಹಾಗೂ ನಮ್ಮಂಥ ಕಾವಿ ಬಟ್ಟೆ ಧರಿಸಿರುವ ಬಸವ ತಾಲಿಬಾನಿಗಳು ಮಾಲೆ ಬಗ್ಗೆ ಟೀಕೆ ಮಾಡಬಹುದು ಎಂದು ಹೇಳಿದ್ದಾರೆ.

ಅಲ್ಲದೆ ನಮ್ಮ ಹುಡುಗಿಯರನ್ನು ಎತ್ತಾಕೊಂಡು ಹೋಗ್ತಿದ್ದಾರೆ. ಅಂಥವರನ್ನು ಆರತಿ ಬೆಳಗಿ ನಿಮ್ಮನ್ನು ಮನೆಗೆ ಕರೆದುಕೊಂಡು ಬರಬೇಕಾ? ಅವರನ್ನು ಹಿಡಿದುಕೊಂಡು ಬಂದು ಅವರಿಗೆ ತಿಳಿಯುವ ಭಾಷೆಯಲ್ಲಿ ಹೇಳಬೇಕು ಎಂದೂ ಸ್ವಾಮೀಜಿ ಹೇಳಿದ್ದಾರೆ. 

Comments are closed.