Home News ಸರಕಾರಿ ಶಾಲಾ ಮಕ್ಕಳಿಗೆ ಇನ್ನು ಮುಂದೆ ಪಠ್ಯಪುಸ್ತಕದ ಜೊತೆ ನೋಟ್‌ ಬುಕ್‌ ಉಚಿತ

ಸರಕಾರಿ ಶಾಲಾ ಮಕ್ಕಳಿಗೆ ಇನ್ನು ಮುಂದೆ ಪಠ್ಯಪುಸ್ತಕದ ಜೊತೆ ನೋಟ್‌ ಬುಕ್‌ ಉಚಿತ

Hindu neighbor gifts plot of land

Hindu neighbour gifts land to Muslim journalist

Government School: ಶಾಲಾ ಶಿಕ್ಷಣ ಇಲಾಖೆ ಸರಕಾರದಿಂದ ಶಾಲಾ ಮಕ್ಕಳಿಗೆ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಪಠ್ಯಪುಸ್ತಕಗಳ ಜೊತೆ ಉಚಿತ ನೋಟ್‌ ಬುಕ್‌ ನೀಡಲು ಸಜ್ಜಾಗಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸರ್ಕಾರಿ ಶಾಲೆ ಹಾಗೂ ಕಾಲೇಜುಗಳಲ್ಲಿ ಶೇ 90% ಬಡ ಮಕ್ಕಳು ಓದುತ್ತಿದ್ದಾರೆ.ಇದರಲ್ಲಿ ಪದವಿ ಪೂರ್ವ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳು ಸಿಗದ ಕಾರಣ ಇಷ್ಟು ವರ್ಷ ನೋಟ್ ಬುಕ್ ಜೊತೆಗೆ ಪಠ್ಯಪುಸ್ತಕಕಗಳನ್ನೂ ಖರೀದಿಸಿ ಬಳಸಬೇಕಿತ್ತು. ಆದರೆ ಇನ್ನು ಮುಂದೆ ಸರ್ಕಾರಿ ಶಾಲಾ ಮಕ್ಕಳಿಗೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ 6 ನೋಟ್ ಬುಕ್​ಗಳನ್ನು ಉಚಿತವಾಗಿ ನೀಡಲು ಸರ್ಕಾರ ಮುಂದಾಗಿದೆ.

ಪೋಷಕರು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಸರ್ಕಾರಿ ಶಾಲೆಗಳ ಮಕ್ಕಳಿಗೆ ನೋಟ್ಸ್ ಬುಕ್ ಸಹ ಸಿಗುತ್ತಿಲ್ಲ. ಇದರಿಂದ ತರಗತಿಯಲ್ಲಿ ಶಿಕ್ಷಕರು ನೀಡುವ ಹೊಮ್ ವರ್ಕ್ ಬರೆಯಲು ಮತ್ತು ತರಗತಿಯ ನೋಟ್ಸ್ ಬರೆದು ಓದಲು ಕಷ್ಟವಾಗಿತ್ತು. ಹೀಗಾಗಿ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತವಾಗಿ 6 ವಿಷಯಗಳಿಗೆ 6 ನೋಟ್ಸ್ ಬುಕ್ ನೀಡಲು ಮುಂದಾಗಿದೆ ಎಂದು ಹೇಳಿದ್ದಾರೆ.