ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಕಾಮುಕ ಅರೆಸ್ಟ್‌

Share the Article

ಉಪ್ಪಿನಂಗಡಿ: ಶಾಲಾ ಕಾಲೇಜುಗಳಿಗೆ ತೆರಳುವ ಅಪ್ರಾಪ್ತ ಬಾಲಕಿಯರನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಘಟನೆಯೊಂದು ಉಪ್ಪಿನಂಗಡಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಅಪ್ರಾಪ್ತ ಬಾಲಕಿಯನ್ನು ಕಳೆದ ಎರಡು ತಿಂಗಳಿನಿಂದ ಹಿಂಬಾಲಿಸಿ ಮನೆಗೆ ಬರಲು ಪೀಡಿಸುತ್ತಿದ್ದ ಈತನನ್ನು ಇದೀಗ ಉಪ್ಪಿನಂಗಡಿ ಪೊಲೀಸರು ಹಿಡಿದಿದ್ದಾರೆ.

ಬಂಧಿತ ಆರೋಪಿಯನ್ನು ಮಹಮ್ಮದ್‌ ಮುಸ್ತಫಾ (40) ಎಂದು ಗುರುತಿಸಲಾಗಿದೆ ಎಂದು ವರದಿಯಾಗಿದೆ.

ಉಪ್ಪಿನಂಗಡಿ ಬಸ್‌ ನಿಲ್ದಾಣದ ಬಳಿ ಬಾಲಕಿ ಕಾಣಿಸಿಕೊಂಡಾಗಲೆಲ್ಲ ಆರೋಪಿ ಆಕೆಯನ್ನು ಹಿಂಬಾಲಿಸಿ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಕಳೆದ ನ.29 ರಂದು ರಸ್ತೆ ಮಧ್ಯೆಯೇ ಬಾಲಕಿಗೆ ನೀನು ನನ್ನ ಮನೆಗೆ ಬಾ ಎಂದು ಪೀಡಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆರೋಪಿಯ ಕಾಟದಿಂದ ಬೇಸತ್ತ ಬಾಲಕಿ ಈ ವಿಷಯವನ್ನು ತನ್ನ ಮನೆಯಲ್ಲಿ ಹೇಳಿದ್ದಾಳೆ. ಕೂಡಲೇ ಬಾಲಕಿಯ ಸಹೋದರ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.

ದೂರು ದಾಖಲಾಗುತ್ತಿದ್ದಂತೆ ಅಲರ್ಟ್‌ ಆದ ಉಪ್ಪಿನಂಗಡಿ ಪೊಲೀಸರು ಆರೋಪಿ ಮುಸ್ತಫಾನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

Comments are closed.