Sanchar Sathi: ವಿವಾದದ ನಡುವೆಯೇ ‘ಸಂಚಾರ್ ಸಾಥಿ’ ಆಪ್ ಡೌನ್ಲೋಡ್ ನಲ್ಲಿ 10 ಪಟ್ಟು ಏರಿಕೆ !! ಇದರ ಪ್ರಯೋಜನವೇನು?

Sanchar Sathi: ಸೈಬರ್ ಸುರಕ್ಷತೆ ದೃಷ್ಟಿಯಿಂದ ಸ್ಮಾರ್ಟ್ ಫೋನ್‌ಗಳಲ್ಲಿ ಸಂಚಾರ್ ಸಾಥಿ ಆಯಪ್ ಅನ್ನು ಕಡ್ಡಾಯವಾಗಿ ಮೊಬೈಲ್ ಉತ್ಪಾದಕರು ಇನ್ನು 3 ತಿಂಗಳಲ್ಲಿ ಅಳವಡಿಸಬೇಕು ಎಂಬ ಕೇಂದ್ರ ಸರ್ಕಾರದ ಆದೇಶ ವಿವಾದಕ್ಕೆ ಗುರಿಯಾಗಿದ್ದು ಈ ಕುರಿತಾಗಿ ಪಕ್ಷಗಳು ಸಂಸತ್ತಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದವು. ಇದರ ಬೆನ್ನಲ್ಲೇ ಕೇಂದ್ರ ಸರ್ಕಾರವು ‘ಸಂಚಾರ ಸಾಥಿ’ ಆಪ್ ಡೌನ್ಲೋಡ್ ಮಾಡಿಕೊಳ್ಳುವುದು ಕಡ್ಡಾಯವಲ್ಲ ಎಂದು ಮತ್ತೆ ಸೂಚನೆಯನ್ನು ನೀಡಿತು. ಈ ವಿವಾದದ ನಡುವೆಯೇ ‘ಸಂಚಾರ ಸಾಥಿ’ ಆಪ್ ಡೌನ್ಲೋಡ್ ಮಾಡುವುದರಲ್ಲಿ ಹತ್ತು ಪಟ್ಟು ಏರಿಕೆಯಾಗಿದೆ ಎಂಬುದು ತಿಳಿದು ಬಂದಿದೆ.

ಹೌದು, ‘ಸಂಚಾರ ಸಾಥಿ’ ಆಯಪ್ ವಿಚಾರ ದೇಶಾದ್ಯಂತ ಚರ್ಚೆಗೆ ಗ್ರಾಸವಾಗುತ್ತಿದ್ದಂತೆ, ಈ ಆಪ್ ಗೆ ಸಾರ್ವಜನಿಕರಿಂದ ಇದ್ದಕ್ಕಿದ್ದಂತೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಯಪ್ ಡೌನ್‌ಲೋಡ್ ಮಾಡಿಕೊಳ್ಳುತ್ತಿದ್ದ ದೈನಂದಿನ ಸರಾಸರಿ ಪ್ರಮಾಣ 60 ಸಾವಿರದಿಂದ 6 ಲಕ್ಷಕ್ಕೆ ಏರಿಕೆಯಾಗಿದೆ’ ಎಂದು ಹೆಸರು ಹೇಳಲು ಇಚ್ಛಿಸದ ದೂರಸಂಪರ್ಕ ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇನ್ನೂ ದೇಶದ ಎಲ್ಲ ಸ್ಮಾರ್ಟ್‌ಫೋನ್‌ಗಳಲ್ಲಿ ಸಂಚಾರ್ ಸಾಥಿ ಆಯಪ್ ಕಡ್ಡಾಯಗೊಳಿಸುವ ಆದೇಶಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು, ಹೀಗಾಗಿ ಆದೇಶ ನೀಡಿದ ಒಂದೇ ದಿನದಲ್ಲಿ ಕೇಂದ್ರ ಸರ್ಕಾರವು ಕಡ್ಡಾಯವೆಂಬ ಸೂಚನೆಯನ್ನು ಹಿಂಪಡೆದಿದೆ. ‘ಈ ಆಯಪ್ ಅನ್ನು ಎಲ್ಲರಿಗೂ ಪರಿಚಯಿಸುವುದು ನಮ್ಮ ಕರ್ತವ್ಯ. ಈ ಆಯಪ್ ಐಚ್ಛಿಕವಾಗಿರಲಿದ್ದು, ಅದನ್ನು ಇಟ್ಟುಕೊಳ್ಳುವುದು ಅಥವಾ ಡಿಲೀಟ್ ಮಾಡಬಹುದಾಗಿದ್ದು, ಇದು ಸಂಪೂರ್ಣವಾಗಿ ಬಳಕೆದಾರರಿಗೆ ಸೇರಿದ್ದು’ ಎಂದು ಸಿಂಧಿಯಾ ಟ್ವೀಟ್ ಮಾಡಿ ತಿಳಿಸಿದ್ದಾರೆ.
ಏನಿದು ಸಂಚಾರ್ ಸಾಥಿ ಆ್ಯಪ್?
ಸಂಚಾರ್ ಸಾಥಿ ಪೋರ್ಟಲ್ ಅನ್ನು ಮೇ 2023 ರಲ್ಲಿ ತೆರೆಯಲಾಗಿದ್ದು ಅದರ ಮುಂದುವರಿದ ಭಾಗವಾಗಿ ಈ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಜನವರಿಯಲ್ಲಿ ದೂರಸಂಪರ್ಕ ಇಲಾಖೆಯು ಆಂಡ್ರಾಯ್ಡ್ ಹಾಗೂ ಐಒಎಸ್ ಬಳಕೆದಾರರಿಗೆ ಈ ಆ್ಯಪ್ ಅನ್ನು ಬಿಡುಗಡೆ ಮಾಡಿತ್ತು.ಈ ಆ್ಯಪ್ ಅನ್ನು ಇನ್‌ಸ್ಟಾಲ್ ಮಾಡಿದ ಬಳಿಕ ಮೊಬೈಲ್ ಕಳ್ಳತನವಾದರೆ ಅಥವಾ ಕಳೆದುಹೋದರೆ ಬ್ಲಾಕ್ ಮಾಡಬಹುದು. ಅಷ್ಟೇ ಅಲ್ಲದೇ ಈ ಫೋನ್ ದೇಶದ ಬೇರೆ ಕಡೆ ಬಳಕೆಯಾಗುತ್ತಿದ್ದರೂ ಕಾನೂನು ಸಂಸ್ಥೆಗಳಿಗೆ ಎಲ್ಲಿ ಈ ಫೋನ್ ಸಕ್ರಿಯವಾಗಿದೆ ಎಂಬ ಮಾಹಿತಿ ಸುಲಭವಾಗಿ ಲಭ್ಯವಾಗುತ್ತದೆ.ಸೈಬರ್ ಅಪರಾಧ, ನಕಲಿ ಐಇಎಂಐ ಸಂಖ್ಯೆ ಬಳಸಿ ನಡೆಸುವ ಕೃತ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಈ ಆ್ಯಪ್ ಇನ್‌ಸ್ಟಾಲ್ ಮಾಡಲು ಕಡ್ಡಾಯ ಮಾಡಿ, ಬಳಿಕ ಇದು ಕಡ್ಡಾಯಬಲ್ಲವೆಂದು ಹೇಳಿದೆ.
Comments are closed.