Devendra Gehlot: ದೊಡ್ಡ ಕುಡುಕ, ವರದಕ್ಷಿಣೆ ಪಿಡುಗ, ಡ್ರಗ್ ಅಡಿಕ್ಟ್ – ರಾಜ್ಯಪಾಲ ಗೆಹ್ಲೋಟ್ ಮೊಮ್ಮಗನ ವಿರುದ್ದ ಗಂಭೀರ ಆರೋಪ!!

Devendra Gehlot: ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್(Thawarchand Gehlot) ಅವರ ಮೊಮ್ಮಗ ದೇವೇಂದ್ರ ಗೆಹ್ಲೋಟ್ ವಿರುದ್ಧ ಹಲವು ಗಂಭೀರ ಆರೋಪಗಳು ಕೇಳಿಬಂದಿವೆ. ಸ್ವತಃ ಅವರ ಪತ್ನಿ ದಿವ್ಯಾ ಗೆಹ್ಲೋಟ್ ಅವರು ವರದಕ್ಷಿಣೆ ಕಿರುಕುಳ, ಕೊಲೆ ಯತ್ನ, ಕೌಟುಂಬಿಕ ಹಿಂಸೆ, ಮತ್ತು ತಮ್ಮ ಅಪ್ರಾಪ್ತ ಮಗಳ ಅಪಹರಣದ ಗಂಭೀರ ಆರೋಪಗಳ ಸುರಿಮಳೆಗಳನ್ನೇ ಗೈದಿದ್ದಾರೆ.

ಪತಿ ದೇವೇಂದ್ರ ಗೆಹ್ಲೋಟ್ (33), ಮಾವ ಜಿತೇಂದ್ರ ಗೆಹ್ಲೋಟ್ (55), ಅಲೋಟ್‌ನ ಮಾಜಿ ಶಾಸಕ, ಸೋದರ ಮಾವ ವಿಶಾಲ್ ಗೆಹ್ಲೋಟ್ (25), ಮತ್ತು ಅಜ್ಜಿ ಅನಿತಾ ಗೆಹ್ಲೋಟ್ (60) ಅವರು 50 ಲಕ್ಷ ರೂಪಾಯಿ ವರದಕ್ಷಿಣೆ ಬೇಡಿಕೆಯ ಮೇರೆಗೆ ವರ್ಷಗಳಿಂದ ಕಿರುಕುಳ ನೀಡುತ್ತಿದ್ದಾರೆ ಎಂದು ದೇವೇಂದ್ರ ಗೆಗೆಹ್ಲೋಟ್ ಅವರ ಪತ್ನಿ ದಿವ್ಯ ಅವರು ಆರೋಪ ಮಾಡಿದ್ದಾರೆ.
ಈ ಜೋಡಿ ಏಪ್ರಿಲ್ 29, 2018 ರಂದು ಮುಖ್ಯಮಂತ್ರಿಗಳ ಕನ್ಯಾದಾನ ಯೋಜನೆಯಡಿಯಲ್ಲಿ ತಾಲ್ (ಅಲೋಟ್) ನಲ್ಲಿ ವಿವಾಹವಾಗಿದ್ದರು. ಮದುವೆಗೆ ಮುನ್ನ ತನ್ನ ಪತಿಯ ಮದ್ಯಪಾನ, ಮಾದಕ ವ್ಯಸನಿಯಾಗಿದ್ದು, ಉದ್ದೇಶಪೂರ್ವಕವಾಗಿ ಮರೆಮಾಡಲಾಗಿದೆ. ಮದುವೆ ಬಳಿಕ ಆಕೆಯ ಪತಿ ಮದ್ಯ ಮತ್ತು ಮಾದಕ ವಸ್ತುಗಳ ವ್ಯಸನಿಯಾಗಿದ್ದಾನೆ ಮತ್ತು ಇತರ ಮಹಿಳೆಯರೊಂದಿಗೆ ಸಂಬಂಧ ಹೊಂದಿದ್ದಾನೆಂದು ತಿಳಿದುಬಂದಿದೆ. ದೈಹಿಕ ಹಿಂಸೆ, ಮಾನಸಿಕ ಹಿಂಸೆ ಮತ್ತು ಭರವಸೆ ನೀಡಿದ ವರದಕ್ಷಿಣೆ ಮೊತ್ತಕ್ಕೆ ಬೇಡಿಕೆ ಇಟ್ಟು ಪದೇ ಪದೇ ನಿಂದಿಸುತ್ತಿದ್ದರು ಎಂದು ಅವರು ಆರೋಪಿಸಿದ್ದಾರೆ.
ಕಳೆದ ಜನವರಿ 26ರ ದಿನವನ್ನು ನೆನಪಿಸಿದ ಅವರು “ಇಂದು ಹಣ ತರದಿದ್ದರೆ, ನಿನ್ನನ್ನು ಕೊಲ್ಲುತ್ತೇನೆ” ಎಂದು ಬೆದರಿಕೆ ಹಾಕಿದ್ದಾನೆ ನಂತರ ತನ್ನನ್ನು ಮೇಲ್ಛಾವಣಿಯಿಂದ ತಳ್ಳಿದ್ದಾನೆ ಎಂದು ಹೇಳಿಕೊಂಡಿದ್ದಾಳೆ. ಕೆಳಗೆ ಬಿದ್ದು ಬೆನ್ನುಮೂಳೆ, ಭುಜ ಮತ್ತು ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದವು. ರಾತ್ರಿಯಿಡೀ ತನಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿಲ್ಲ ಎಂದು ಅವರು ಆರೋಪಿಸಿದ್ದಾರೆ.
Comments are closed.