Cabinet Meeting: ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲು ಅನುಮೋದನೆಗೊಂಡ ವಿಧೇಯಕಗಳಿವು

Share the Article

Cabinet Meeting: ಡಿಸೆಂಬರ್ 8 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ರಾಜ್ಯ ಸರ್ಕಾರದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಅಧಿವೇಶನದ ಪೂರ್ವಭಾವಿಯಾಗಿ ನಿನ್ನೆ ರಾಜ್ಯ ಸಚಿವ ಸಂಪುಟ ಸಭೆ ನಡೆದಿದ್ದು, ಅಧಿವೇಶನದಲ್ಲಿ ಯಾವೆಲ್ಲ ವಿಧೇಯಕಗಳನ್ನು ಮಂಡಿಸಬೇಕೆಂದು ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗಿದೆ. ಅವುಗಳ ಕುರಿತು ಸರ್ಕಾರ ಇದೀಗ ಮಾಹಿತಿಯನ್ನು ಹಂಚಿಕೊಂಡಿದೆ. ಹಾಗಿದ್ದರೆ ಅಧಿವೇಶನದಲ್ಲಿ ಯಾವ ವಿಧೇಯಕಗಳು ಮಂಡನೆ ಯಾಗುತ್ತವೆ ಎಂದು ನೋಡೋಣ.

  • ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ – 2025
  • ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ – 2025
  • ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ – 2025
  • ಶ್ರೀ ಚಾಮು೦ಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ – 2025
  • ಕರ್ನಾಟಕ ಒಳನಾಡು ನೌಕೆ ನಿಯಮಗಳು – 2025
  • ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ತಿದ್ದುಪಡಿ) ವಿಧೇಯಕ – 2025
  • ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ವಿಧೇಯಕ – 2025

Comments are closed.