Mangalore: ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು!

Mangalore: ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಗುತ್ತಿಗಾರಿನ ಚಿಕ್ಕುಳಿಯಲ್ಲಿ ನಡೆದಿದೆ.

ಗುತ್ತಿಗಾರಿನ ಚಿಕ್ಕುಳಿ ಬಳಿಯ ನಿವಾಸಿ ಕುಕ್ಕೆ ಸುಬ್ರಹ್ಮಣ್ಯ ಪದವಿ ಕಾಲೇಜಿನ ದ್ವಿತೀಯ ವರ್ಷದ ವಿದ್ಯಾರ್ಥಿನಿ ಪೂಜಾ (19) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.
ಪೂಜಾ ಮೂರು ದಿನಗಳ ಹಿಂದೆ ಇಲಿಪಾಷಾಣ ಸೇವಿಸಿದ್ದರು. ಅಸ್ವಸ್ಥಗೊಂಡ ಆಕೆಯನ್ನು ಎರಡು ದಿನಗಳ ಹಿಂದೆ ಮಂಗಳೂರಿನ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Comments are closed.