Home Crime Crime: ಎರಡು ಗುಂಪುಗಳ ನಡುವೆ ಮಾರಾಮಾರಿ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

Crime: ಎರಡು ಗುಂಪುಗಳ ನಡುವೆ ಮಾರಾಮಾರಿ: ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ

Hindu neighbor gifts plot of land

Hindu neighbour gifts land to Muslim journalist

Crime: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ನಾಯಕನೋರ್ವನನ್ನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣ ಸಮೀಪದ ಕಲ್ಮುರುಡೇಶ್ವರ ಮಠದ ಬಳಿ ನಡೆದಿದೆ. ಮೃತರನ್ನ ಗಣೇಶ್ ಗೌಡ (38) ಎಂದು ಗುರುತಿಸಲಾಗಿದೆ.

ಗಣೇಶ್ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊಲೆಗೂ ಮುನ್ನ 2 ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಗಲಾಟೆ ವಿಕೋಪಕ್ಕೆ ತೆರಳಿ ಮಚ್ಚಿನಿಂದ ಗಣೇಶ್ ಮೇಲೆ ಭೀಕರವಾಗಿ ಹಲ್ಲೆ ಮಾಡಲಾಗಿದೆ. ಗಂಭೀರವಾಗಿ ಗಾಯಗೊಂಡ ಗಣೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.