ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ನಿಂದ ನೋಟಿಸ್‌

Share the Article

ಚುನಾವಣಾ ಅಕ್ರಮ ಆರೋಪ ಕುರಿತು ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ. 2023 ರ ವಿಧಾನಸಭಾ ಚುನಾವಣೆಯಲ್ಲಿ ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಅವರ ಗೆಲುವನ್ನು ಪ್ರಶ್ನೆ ಮಾಡಿ ಕೆ.ಶಂಕರ್‌ ಅವರು ಸಲ್ಲಿಸಿ ಮೇಲ್ಮನವಿ ವಿಚಾರಣೆ ಮಾಡಿರುವ ನ್ಯಾ.ವಿಕ್ರಮನಾಥ್‌ ನೇತೃತ್ವದ ದ್ವಿ ಸದಸ್ಯ ಪೀಠ, ಸಿದ್ದರಾಮಯ್ಯ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿ ಮಾಡಿದೆ.

ಪ್ರಕರಣವೇನು?

2023 ರ ಚುನಾವಣೆಯಲ್ಲಿ ಆಮಿಷಗಳ ಮೂಲಕ ಮತದಾರರನ್ನು ತಮ್ಮೆಡೆಗೆ ಸೆಳೆಯುವುದು ಚುನಾವಣಾ ನಿಯಮಗಳಿಗೆ ವಿರುದ್ಧವಾಗಿದೆ. ಸಿದ್ದರಾಮಯ್ಯನವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಕೆ.ಎಂ.ಶಂಕರ್‌ ಹೈಕೋರ್ಟ್‌ ಮೆಟ್ಟಿಲು ಏರಿದ್ದರು.

Comments are closed.