Toxic : ಯಶ್ ‘ಟಾಕ್ಸಿಕ್’ ಸಿನಿಮಾ ಫಲಿತಾಂಶ ಏನಾಗಬಹುದು? ಖ್ಯಾತ ಜ್ಯೋತಿಷಿಯಿಂದ ಶಾಕಿಂಗ್ ಭವಿಷ್ಯ

Share the Article

Toxic : ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾದ ಬಹುತೇಕ ಚಿತ್ರೀಕರಣ ಮುಗಿದಿದೆ. ಬಹುಕೋಟಿ ವೆಚ್ಚದಲ್ಲಿ ಸಿನಿಮಾ ನಿರ್ಮಾಣವಾಗ್ತಿದೆ. ಚಿತ್ರ ಬಿಡುಗಡೆಗೆ 100 ದಿನ ಬಾಕಿಯಿದೆ. ಈ ನಡುವೆ ‘ಟಾಕ್ಸಿಕ್’ ಚಿತ್ರದ ಫಲಿತಾಂಶ ಏನಾಗಬಹುದು ಎಂದು ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಭವಿಷ್ಯ ನುಡಿದಿದ್ದಾರೆ.

ಟ್ವಿಟ್ಟರ್‌ನಲ್ಲಿ ಆಕ್ಟೀವ್ ಆಗಿರುವ ಪ್ರಶಾಂತ್ ಕಿಣಿ ನೆಟ್ಟಿಗರು ಕೇಳುವ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ. ತಮ್ಮ ಲೆಕ್ಕಾಚಾರದ ಪ್ರಕಾರ ಭವಿಷ್ಯ ಹೇಳುತ್ತಾರೆ. ಅಭಿಮಾನಿಯೊಬ್ಬರು ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ಭವಿಷ್ಯ ಏನಾಗಬಹುದು ಎನ್ನುವ ಪ್ರಶ್ನೆಗೆ “ರಾಕಿಂಗ್ ಸ್ಟಾರ್ ಯಶ್ ಅವರ ಮುಂದಿನ ಟಾಕ್ಸಿಕ್ ದೊಡ್ಡ ಹಿಟ್ ಆಗಲಿದೆ…. ಆದರೆ ‘KGF’ ರೀತಿ ಭಾರೀ ಪರಿಣಾಮ ಬೀರುವುದಿಲ್ಲ….. ಯಶ್‌ಗೆ ‘KGF’ ನಂತಹ ಮತ್ತೊಂದು ಟ್ರೆಂಡ್ ಸೆಟ್ಟಿಂಗ್ ಸಿನಿಮಾ ಎಂದಿಗೂ ಸಿಗುವುದಿಲ್ಲ…..!! ” ಎಂದು ರಿಪ್ಲೇ ಮಾಡಿದ್ದಾರೆ.

ಟಾಕ್ಸಿಕ್’ ಚಿತ್ರಕ್ಕೆ ಗೀತು ಮೋಹನ್ ದಾಸ್ ಆಕ್ಷನ್ ಕಟ್ ಹೇಳ್ತಿದ್ದಾರೆ. ರವಿ ಬಸ್ರೂರು ಹಾಗೂ ಅನಿರುದ್ದ್ ರವಿಚಂದರ್ ಮ್ಯೂಸಿಕ್ ಕಂಪೋಸ್ ಮಾಡ್ತಾರೆ ಎನ್ನಲಾಗ್ತಿದೆ. ವಿದೇಶದ ಕಲಾವಿದರು, ತಂತ್ರಜ್ಞರು ಚಿತ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರದಲ್ಲಿ ವಿಭಿನ್ನ ಶೇಡ್‌ಗಳಿರೋ ಪಾತ್ರದಲ್ಲಿ ಯಶ್ ನಟಿಸುತ್ತಿದ್ದಾರೆ. ನಯನತಾರಾ, ಕಿಯಾರಾ ಅದ್ವಾನಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಸೇರಿದಂತೆ ಘಟಾನುಘಟಿ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ವಿದೇಶದ ಭಾಷೆಗಳಿಗೆ ಡಬ್ ಆಗಿ ಸಿನಿಮಾ ತೆರೆಗೆ ಬರಲಿದೆ. ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ.

Comments are closed.