Madhu Bangarappa : ಒಂದೇ ಒಂದು ಮಗು ಇದ್ರೂ ಶಾಲೆ ತೆರೆಯುತ್ತೇವೆ – ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಣೆ

Madhu Bangarappa : ಶಾಲೆಯಲ್ಲಿ ಒಂದೇ ಒಂದು ಮಗು ಇದ್ದರೂ ಕೂಡ ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಳಗಾವಿ ಅಧಿವೇಶನದಲ್ಲಿ ಸದಸ್ಯ ಚಿದಾನಂದ ಎಂ.ಗೌಡ ಹಾಗೂ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ ಎಂದರು.
ಅಲ್ಲದೆ ಕಡಿಮೆ ವಿದ್ಯಾರ್ಥಿಗಳ ಸಂಖ್ಯೆಯಿರುವ ಶಾಲೆಗಳನ್ನು ಸರ್ಕಾರ ಪಕ್ಕದ ಶಾಲೆಗಳಿಗೆ ವಿಲೀನಗೊಳಿಸುತ್ತದೆ ಇಲ್ಲವೇ ಶಾಲೆಗಳನ್ನು ಮುಚ್ಚಲಾಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲಾಗುತ್ತದೆ. ಇದಕ್ಕೆ ಮಾಧ್ಯಮಗಳು ಕೂಡ ಪುಷ್ಟಿ ನೀಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾವು ಸರ್ಕಾರಿ ಶಾಲೆಗಳನ್ನು ಎಲ್ಲಿಯೂ ಮುಚ್ಚುತ್ತೇವೆ ಎಂದು ಇಲ್ಲವೇ ವಿಲೀನ ಮಾಡುತ್ತೇವೆ ಎಂದು ಹೇಳಿಲ್ಲ. ಅಗತ್ಯಬಿದ್ದರೆ ಸರ್ಕಾರಿ ಶಾಲೆಗಳ ಸಂಖ್ಯೆಯನ್ನು ಹೆಚ್ಚಳ ಮಾಡುತ್ತೇವೆ. ಈ ಬಗ್ಗೆ ಎದ್ದಿರುವ ಗೊಂದಲಗಳು ಕೇವಲ ಊಹಾಪೋಹ ಎಂದು ಸ್ಪಷ್ಟಪಡಿಸಿದರು.
Comments are closed.