CM Siddaramiah: ‘ಡಿಕೆಶಿ ಅವಕಾಶ ಕೇಳಿದ್ರು’ ಎಂಬ ಹೇಳಿಕೆ ವಿಚಾರ- ಪುತ್ರ ಯತೀಂದ್ರಗೆ ಸಿಎಂ ಸಿದ್ದರಾಮಯ್ಯ ಖಡಕ್ ಕ್ಲಾಸ್

Share the Article

CM Siddaramiah : ರಾಜ್ಯದಲ್ಲಿ ಸಿಎಂ ಕುರ್ಚಿ ವಿಚಾರ ಸಾಕಷ್ಟು ಮಟ್ಟದಲ್ಲಿ ಸದ್ದು ಮಾಡಿದ್ದು ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಡುವೆ ವೈಮನಸ್ಸಿಗೆ ಕಾರಣವಾಗಿತ್ತು. ಬಳಿಕ ಬ್ರೇಕ್ ಫಾಸ್ಟ್ ಮಾಡುವುದರೊಂದಿಗೆ ಈ ಸಮಸ್ಯೆಯನ್ನು ಇಬ್ಬರು ಇತ್ಯರ್ಥಪಡಿಸಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಸಿಎಂ ಪತ್ರ ಯತೀಂದ್ರ ಅವರು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಅವಕಾಶ ಕೊಡಿ ಎಂದು ಕೇಳಿದ್ದರು. ಆದರೆ, ನಾಯಕತ್ವ ಬದಲಾವಣೆ ಪರಿಸ್ಥಿತಿ ಇಲ್ಲ ಎಂದು ಪಕ್ಷದ ಹೈಕಮಾಂಡ್ ಹೇಳಿದೆ ಎಂದು ಹೇಳಿದ್ದರು. ಈ ವಿಚಾರ ಕಾಂಗ್ರೆಸ್ ಪಾಳೆಯಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಡಿಕೆ ಶಿವಕುಮಾರ್ ಅವರು ಕೂಡ ಈ ವಿಚಾರವಾಗಿ ಟಾಂಗ್ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೂಡ ತಮ್ಮ ಪುತ್ರನಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಹೌದು, ಪುತ್ರನ ಈ ಹೇಳಿಕೆಯಿಂದ ಪಕ್ಷದಲ್ಲಿ ಮತ್ತು ಸರ್ಕಾರದ ಮಟ್ಟದಲ್ಲಿ ಗೊಂದಲ ಉಂಟಾಗಿರುವುದು ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ಬಂದಿದೆ. ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಬೇಕಾದ ವಿಷಯವನ್ನು ಬಹಿರಂಗವಾಗಿ ಮಾತನಾಡಿರುವುದು ಸ್ವತಃ ಸಿದ್ದರಾಮಯ್ಯ ಅವರಿಗೆ ಅಸಮಾಧಾನ ತಂದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಕ್ಷಣವೇ ಪುತ್ರ ಯತೀಂದ್ರ ಅವರಿಗೆ ಬುಲಾವ್ ನೀಡಿ ಸರ್ಕಿಟ್ ಹೌಸ್ ಗೆ ಕರೆಸಿಕೊಂಡಿದ್ದಾರೆ. ಬರೋಬ್ಬರಿ ಒಂದು ಗಂಟೆಗಳ ಕಾಲ ರಹಸ್ಯ ಮಾತುಕತೆ ನಡೆಸಿ ಪುತ್ರನ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಿಎಂ, ನಾಯಕತ್ವದ ವಿಚಾರವಾಗಿ ಯಾವುದೇ ಕಾರಣಕ್ಕೂ ಬಹಿರಂಗ ಹೇಳಿಕೆ ನೀಡಬಾರದು ಎಂದು ತಾಕೀತು ಮಾಡಿದ್ದಾರೆ.

ನಿನ್ನ ಹೇಳಿಕೆಯನ್ನು ಜನ ಮತ್ತು ಪಕ್ಷದ ಕಾರ್ಯಕರ್ತರು ನನ್ನದೇ ಹೇಳಿಕೆ ಎಂದು ಭಾವಿಸುವ ಸಾಧ್ಯತೆ ಇರುತ್ತದೆ. ಇದರಿಂದ ಪಕ್ಷದಲ್ಲಿ ಒಡಕು ಮೂಡಲು ನೀನೇ ಕಾರಣವಾಗುತ್ತೀಯಾ. ಆದ್ದರಿಂದ ಇನ್ನು ಮುಂದೆ ಮಾಧ್ಯಮಗಳ ಮುಂದೆ ಅಧಿಕಾರ ಹಂಚಿಕೆ ಅಥವಾ ನಾಯಕತ್ವದ ಬಗ್ಗೆ ಚಕಾರ ಎತ್ತಬೇಡ ಎಂದು ಸಿಎಂ ಕಟುವಾದ ಶಬ್ದಗಳಲ್ಲಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Comments are closed.