Egg: ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆ – ರಾಜ್ಯ ಸರ್ಕಾರದಿಂದ ಮಹತ್ವದ ನಿರ್ಧಾರ !!

Egg: ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಭೂಪತಿಯಾದ ಬೆನ್ನಲ್ಲೇ ಕರ್ನಾಟಕ ಸರ್ಕಾರವು ಎಚ್ಚೆತ್ತುಕೊಂಡು ರಾಜ್ಯದಲ್ಲಿ ಹೈ ಅಲರ್ಟ್ ಘೋಷಿಸಿದೆ.

ಹೌದು, ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಒಂದು ವೇಳೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣವಾದ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಹಾಗಾಗಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿ ಸಂಗ್ರಹಕ್ಕೆ ಸೂಚನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನಿರ್ದಿಷ್ಟ ಸಂಸ್ಥೆಯೊಂದಕ್ಕೆ ಸೇರಿದ ಕೋಳಿ ಮೊಟ್ಟೆ ಪರೀಕ್ಷೆಗೆ ಒಳಪಡಿಸಿದಾಗ ಅದರಲ್ಲಿ ಕ್ಯಾನ್ಸರ್‌ಕಾರಕ ಅಂಶಗಳು ಕಂಡು ಬಂದಿವೆ ಎಂದು ಯುಟ್ಯೂಬ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದೆ. ಒಂದು ವೇಳೆ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.
Comments are closed.