Pocso Case: ಆರ್ಕೆಸ್ಟ್ರಾದಲ್ಲಿ ಡ್ಯಾನ್ಸ್ ಮಾಡಲು ಬಂದಿದ್ದ ಯುವತಿ ಮೇಲೆ ಅತ್ಯಾಚಾರ – ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಪೋಕ್ಸೊ ಕೇಸ್


Pocso Case: ಆರ್ಕೆಸ್ಟ್ರಾ ಒಂದಕ್ಕೆ ಡ್ಯಾನ್ಸ್ ಮಾಡಲು ಬಂದಿದ್ದ ಯುವತಿಯ ಮೇಲೆ ಅತ್ಯಾಚಾರದ ಆರೋಪದಡಿ ಖ್ಯಾತ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ ವಿರುದ್ಧ ಇದೀಗ ಪೋಕ್ಸೋ ಪ್ರಕರಣ ದಾಖಲಾಗಿದೆ.

ಹೌದು, ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡಲು ಕರೆದುಕೊಂಡು ಹೋಗಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್ ಸ್ಟಾರ್ ಎಂದು ಗುರುತಿಸಿಕೊಂಡಿರುವ ಉತ್ತರ ಕರ್ನಾಟಕದ ಜಾನಪದ ಗಾಯಕ ಮ್ಯೂಸಿಕ್ ಮೈಲಾರಿ (Music Mailari) ಸೇರಿ ಏಳು ಜನರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
ಅಂದಹಾಗೆ ಬೆಳಗಾವಿ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು ಎನ್ನಲಾಗಿದೆ. ಕಾರ್ಯಕ್ರಮದ ವೇಳೆ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ. ಅಲ್ಲದೆ, ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾಳೆ. ಸದ್ಯ ಮ್ಯೂಸಿಕ್ ಮೈಲಾರಿ ಸೇರಿದಂತೆ ಏಳು ಜನರು ಅಪರಾಧ ಎಸಗಿದ್ದಾರೆ ಎಂದು ಬಾಲಕಿ ಆರೋಪಿಸಿದ್ದಾಳೆ.
ಡಿಸೆಂಬರ್ 14ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಂತರ ಅದನ್ನು ಡಿಸೆಂಬರ್ 15ರಂದು ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಸದ್ಯ, ಮಹಾಲಿಂಗಪುರ ಠಾಣೆಯಲ್ಲಿ ಮ್ಯೂಸಿಕ್ ಮೈಲಾರಿ ಹಾಗೂ ಇತರ ಆರು ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

Comments are closed.