Work from home: ನಾಳೆಯಿಂದಲೇ ಖಾಸಗಿ-ಸರ್ಕಾರಿ ಶೇ.50 ಉದ್ಯೋಗಿಗಳಿಗೆ ರಷ್ಟು ವರ್ಕ್ ಫ್ರಮ್ ಹೋಮ್ ಕಡ್ಡಾಯ


Work from home: ನಾಳೆಯಿಂದಲೇ (ಡಿ.18) ಸರ್ಕಾರಿ ಹಾಗೂ ಖಾಸಗಿ ಕಂಪನಿಗಳ ಶೇಕಡಾ 50 ರಷ್ಟು ಉದ್ಯೋಗಿಗಳೆ ವರ್ಕ್ ಫ್ರಮ್ ಹೋಮ್ (ಮನೆಯಿಂದ ಕೆಲಸ) ಕಡ್ಡಾಯ ಎಂದು ದೆಹಲಿ ಸರ್ಕಾರ ಆದೇಶ ಹೊರಡಿಸಿದೆ.

ದೆಹಲಿಯಲ್ಲಿ ವಾಯು ಮಾಲಿನ್ಯ ವಿಪರೀತವಾಗಿದೆ. ಹಲವು ಕ್ರಮಗಳನ್ನು ಕೈಗೊಂಡರೂ ವಾಯು ಮಾಲಿನ್ಯ ನಿಯಂತ್ರಣಕ್ಕೆ ಸಿಗುತಿಲ್ಲ. ಒಂದೆಡೆ ವಾಹನಗಳ ದಟ್ಟಣೆ, ಕಾರ್ಖಾನೆಗಳು, ಕಾಮಗಾರಿ ಸೇರಿದಂತೆ ಎಲ್ಲವೂ ದೆಹಲಿ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಇದರ ಬೆನ್ನಲ್ಲೇ ಡಿಸೆಂಬರ್ 18 ರಿಂದ ದೆಹಲಿಯಲ್ಲಿ ಎಲ್ಲಾ ಖಾಸಗಿ ಹಾಗೂ ಸರ್ಕಾರಿ ಕಚೇರಿಗಳು ತಮ್ಮ ಉದ್ಯೋಗಿಗಳ ಶೇಕಡಾ 50 ರಷ್ಟು ಮಂದಿಗೆ ಕಡ್ಡಾಯವಾಗಿ ಮನೆಯಿಂದ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆದೇಶ ಹೊರಡಿಸಿದೆ. ಈ ನಿಯಮ ಪಾಲಿಸದಿದ್ದರೆ ದುಬಾರಿ ದಂಡ ವಿಧಿಸಲಾಗುತ್ತದೆ ಎಂದಿದೆ.
ತುರ್ತ ಸೇವಾ ವಿಭಾಗಕ್ಕೆ ವಿನಾಯಿತಿ :
ಶೇಕಡಾ 50 ರಷ್ಟು ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ ನೀತಿ ನಾಳೆಯಿಂದ ದೆಹಲಿಯಲ್ಲಿ ಜಾರಿಗೆ ಬರುತ್ತಿದೆ. ಇದರಲ್ಲಿ ತುರ್ತು ಸೇವಾ ವಿಭಾಗಗಳಿಗೆ ವಿನಾಯಿತಿ ನೀಡಲಾಗಿದೆ. ಆಸ್ಪತ್ರೆ ಸೇರಿದಂತೆ ಇತರ ಸೇವೆಗಳು ಈ ನಿಯಮಕ್ಕೆ ಒಳಪಡುವುದಿಲ್ಲ ಎಂದಿದೆ. ಐಟಿ ಸೇರಿದಂತೆ ಇತರ ಕಂಪನಿಗಳು ಈ ನಿಯಮ ಪಾಲಿಸಬೇಕು ಎಂದಿದೆ. ಈ ಮೂಲಕ ವಾಹನಗಳ ಸಂಚಾರ ದಟ್ಟಣೆ ಕಡಿಮೆ ಮಾಡಿ ವಾಯು ಮಾಲಿನ್ಯ ತಗ್ಗಿಸಲು ದೆಹಲಿ ಸರ್ಕಾರ ಪ್ಲಾನ್ ಮಾಡಿದೆ. ವಾಹನಗಳ ಸಂಚಾರದಿಂದ ಹೊರಬರುವ ಕಾರ್ಬನ್ ಡೈಆಕ್ಸೈಡ್ ಪರಿಸರ ಮಾಲಿನ್ಯದ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ. ಹೀಗಾಗಿ ವರ್ಕ್ ಫ್ರಮ್ ಹೋಮ್ ಮೂಲಕ ಈ ಮಾಲಿನ್ಯ ತಗ್ಗಿಸಲು ಪ್ಲಾನ್ ಮಾಡಲಾಗಿದೆ.

Comments are closed.