ಧರ್ಮಸ್ಥಳ: ಮಾಸ್ಕ್‌ ಮ್ಯಾನ್‌ ಶಿವಮೊಗ್ಗ ಸೆಂಟ್ರಲ್‌ ಜೈಲ್‌ನಿಂದ ಬಿಡುಗಡೆ

Share the Article

ಶಿವಮೊಗ್ಗ: ಧರ್ಮಸ್ಥಳ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿದ್ದ ಆರೋಪಿ ಚಿನ್ನಯ್ಯ ಬಿಡುಗಡೆಯಾಗಿದ್ದಾನೆ.

ಚಿನ್ನಯ್ಯ ಪತ್ನಿ ಮಲ್ಲಿಕಾ ಅವರು ವಕೀಲರ ಜೊತೆಗೆ ಕಾರಿನಲ್ಲಿ ತೆರಳಿದ್ದಾರೆ. ಚಿನ್ನಯ್ಯ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ನಿನ್ನೆ ಬೆಳ್ತಂಗಡಿ ಕೋರ್ಟ್‌ನಲ್ಲಿ ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಕಾರಣದಿಂದ ಇಂದು ಶಿವಮೊಗ್ಗ ಜಿಲ್ಲಾ ಕೇಂದ್ರ ಕಾರಾಗೃಹದಿಂದ ಚಿನ್ನಯ್ಯ ಅವರನ್ನು ಬಿಡುಗಡೆ ಮಾಡಲಾಗಿದೆ.

Comments are closed.