HIV: ದಾನ ಪಡೆದ ರಕ್ತದಿಂದ 5 ಮಕ್ಕಳಿಗೆ ಹೆಚ್‌ಐವಿ ಸೋಂಕು!


HIV: ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ (Satna Hospital) ಚಿಕಿತ್ಸೆ ವೇಳೆ ರಕ್ತದಾನ ಪಡೆದ 6 ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದು, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಭಾರೀ ಕಳವಳ ವ್ಯಕ್ತವಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಮೂವರು ಆರೋಗ್ಯ ಸಿಬ್ಬಂದಿಯನ್ನ ಅಮಾನತುಗೊಳಿದ್ದು, ತನಿಖೆಗೂ ಆದೇಶಿಸಿದೆ.

ಥಲಸ್ಸೆಮಿಯಾದಿಂದ (Thalassemia) ಬಳಲುತ್ತಿದ್ದ 15 ವರ್ಷದೊಳಗಿನ 6 ಮಕ್ಕಳಿಗೆ ರಕ್ತ ಕೊಡುವಾಗ ವೈದ್ಯರು ಯಡವಟ್ಟು ಮಾಡಿದ್ದಾರೆ. ಬಾಧಿತ ಮಕ್ಕಳಿಗಾಗಿ 3 ಬ್ಯಾಂಕ್‌ಗಳಿಂದ (Blood Bank) 189 ಯೂನಿಟ್ ರಕ್ತವನ್ನ ಸಂಗ್ರಹಿಸಲಾಗಿತ್ತು. ಈ ರಕ್ತವನ್ನ 150ಕ್ಕೂ ಹೆಚ್ಚು ದಾನಿಗಳಿಂದ ಈ ರಕ್ತ ಪಡೆಯಲಾಗಿತ್ತು. ಆದ್ರೆ ರಕ್ತಪರೀಕ್ಷೆ ಸಂದರ್ಭದಲ್ಲಿ ಉಂಟಾದ ವೈಫಲ್ಯದಿಂದ ಐವರು ಮಕ್ಕಳಿಗೆ ಸೋಂಕು ತಗುಲಿದೆ.
ದಾನ ಪಡೆದ ರಕ್ತವನ್ನ ಮಕ್ಕಳಿಗೆ ನೀಡಿದ ಬಳಿಕ ಸೋಂಕು ತಗುಲಿದೆ. ಇದು ಮಧ್ಯಪ್ರದೇಶದಲ್ಲಿ (Madhya Pradesh) ಇತ್ತೀಚೆಗೆ ಕಂಡ ಅತಿದೊಡ್ಡ ಆರೋಗ್ಯ ವೈಫಲ್ಯವಾಗಿದೆ. ಘಟನೆ ಸಂಬಂಧ ಮೂವರು ಆರೋಗ್ಯ ಸಿಬ್ಬಂದಿಯನ್ನ ಅಮಾನತು ಮಾಡಲಾಗಿದೆ. ಅಲ್ಲದೇ ಸೋಂಕಿತರ ರಕ್ತವನ್ನ ಮಕ್ಕಳಿಗೆ ನೀಡಲಾಗಿದೆ ಎಂಬ ಪ್ರಕರಣದ ತನಿಖೆಗೆ ರಚಿಸಲಾಗಿರುವ ಸಮಿತಿ ಪ್ರಾಥಮಿಕ ವರದಿಯ ಆಧಾರದಲ್ಲಿ ಗುರುವಾರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಕ್ಕಳಿಗೆ ಹೆಚ್‌ಐವಿ ಸೋಂಕು ತಗುಲಿರುವ ಪ್ರಕರಣ ತನಿಖೆ ಸಲುವಾಗಿ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಡಿಸೆಂಬರ್ 16ರಂದು ಸಮಿತಿ ರಚಿಸಿತ್ತು.
ವರದಿಯ ಬೆನ್ನಲ್ಲೇ, ರಕ್ತ ಬ್ಯಾಂಕ್‌ನ ಉಸ್ತುವಾರಿ ಡಾ. ದೇವೇಂದ್ರ ಪಟೇಳ್, ಪ್ರಯೋಗಾಲಯದ ತಂತ್ರಜ್ಞ ರಾಮ್ ಭಾಯ್ ತ್ರಿಪಾಠಿ ಮತ್ತು ನಂದಲಾಲ್ ಪಾಂಡೆ ಎಂಬವರನ್ನ ಅಮಾನತು ಮಾಡಿದೆ. ಹಾಗೆಯೇ, ಜಿಲ್ಲಾ ಆಸ್ಪತ್ರೆಯಲ್ಲಿ ಸಿವಿಲ್ ಸರ್ಜನ್ ಆಗಿದ್ದ ಮನೋಜ್ ಶುಕ್ಲಾ ಅವರಿಗೂ ಶೋಕಾಸ್ ನೋಟಿಸ್ ನೀಡಲಾಗಿದ್ದು, ಲಿಖಿತ ವಿವರಣೆ ನೀಡುವಂತೆ ಸೂಚಿಸಲಾಗಿದೆ. ಹೆಚ್‌ಐವಿ ಸೋಂಕಿತರ ರಕ್ತಪೂರಣದಿಂದಾಗಿ 12 ರಿಂದ 15 ವರ್ಷದೊಳಗಿನ 6 ಮಕ್ಕಳಲ್ಲಿ ಇತ್ತೀಚೆಗೆ ಹೆಚ್‌ಐವಿ ದೃಢಪಟ್ಟಿತ್ತು. ನಂತರ ಒಬ್ಬರು ಫೋಷಕರಲ್ಲೂ ಸೋಂಕು ಪತ್ತೆಯಾಗಿತ್ತು ಎಂದು ಅಧಿಕಾರಿಗಳು ಮಂಗಳವಾರ (ಡಿ.16) ತಿಳಿಸಿದ್ದರು. ಸತ್ನಾ, ಜಬಲ್ಪುರ ಮತ್ತು ಇತರೆಡೆಗಳಲ್ಲಿರುವ ಜಿಲ್ಲಾ ಆಸ್ಪತ್ರೆಗಳಲ್ಲಿ ಶಂಕಿತ ರಕ್ತ ವರ್ಗಾವಣೆಯ ನಂತರ 12 ರಿಂದ 15 ವರ್ಷದೊಳಗಿನ ಆರು ಮಕ್ಕಳು ಹೆಚ್‌ಐವಿ ಪಾಸಿಟಿವ್ ಎಂದು ಮೊದಲು ಕಂಡುಬಂದಿತ್ತು. ಅವರಲ್ಲಿ ಒಬ್ಬರ ಪೋಷಕರು ಸಹ ಸೋಂಕಿಗೆ ಒಳಗಾಗಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ಮಂಗಳವಾರ (ಡಿ.16) ತಿಳಿಸಿದ್ದಾರೆ. ಮಕ್ಕಳಿಗೆ ಜನವರಿ – ಮೇ ತಿಂಗಳ ನಡುವೆ ಸೋಂಕಿತ ರಕ್ತಪೂರಣವಾಗಿರುವ ಸಾಧ್ಯತೆ ಇದೆ. ಎಲ್ಲ ಮಕ್ಕಳಿಗೆ ಹೆಚ್‌ಐವಿ ಪ್ರೋಟೊಕಾಲ್ ಅನುಸಾರ ಚಿಕಿತ್ಸೆ ನೀಡಲಾಗುತ್ತಿದೆ.

Comments are closed.