Nithish Kumar : ಮುಸ್ಲಿಂ ಮಹಿಳೆಯ ಹಿಜಾಬ್ ಎಳೆದ ನಿತೀಶ್ ಕುಮಾರ್ ವಿರುದ್ಧ ಬಿಜೆಪಿ ನಾಯಕಿ ಆಕ್ರೋಶ !!


Nithish Kumar : ಸಮಾರಂಭ ಒಂದರಲ್ಲಿ ಬಿಹಾರದ ಮುಖ್ಯಮಂತ್ರಿ ಆದ ನಿತೀಶ್ ಕುಮಾರ್ ಅವರು ಫೋಟೋದಲ್ಲಿ ಕಾಣಿಸುವುದಿಲ್ಲ ಎಂದು ಮುಸ್ಲಿಂ ಯುವತಿಯ ಹಿಜಾಬನ್ನು ಎಳೆದ ಪ್ರಕರಣ ದೇಶಾದ್ಯಂತ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಇದೀಗ ನಿತೀಶ್ ಕುಮಾರ್ ಅವರ ಮಿತ್ರ ಪಕ್ಷವಾದ ಬಿಜೆಪಿಯ ನಾಯಕಿ ನಿತೀಶ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೌದು, ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗದ ಉಪಾಧ್ಯಕ್ಷೆ ಆಗಿರುವ ಅಪರ್ಣಾ ಯಾದವ್ ಈ ಕುರಿತು ಪ್ರತಿಕ್ರಿಯಿಸಿ, ಯಾವುದೇ ಮಹಿಳೆಯ ಘನತೆಗೆ ಧಕ್ಕೆ ತರುವ ಹಕ್ಕು ಅಥವಾ ಆಕೆಯ ಧರ್ಮ ಅಥವಾ ಜಾತಿಗೆ ಸಂಬಂಧಿಸಿದ ಕೀಳು ಮಟ್ಟದ ಹೇಳಿಕೆ ನೀಡುವ ಹಕ್ಕು ಯಾರಿಗೂ ಇಲ್ಲ ಎಂದು ಹೇಳಿದ್ದಾರೆ.
ಅಲ್ಲದೆ ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ತಮ್ಮ ನಡವಳಿಕೆ ಮತ್ತು ಭಾಷೆಯ ಬಗ್ಗೆ ಎಚ್ಚರ ವಹಿಸಬೇಕು. ಅವರ ಕೃತ್ಯಗಳು ಸಮಾಜದ ಮೇಲೆ ವಿಶೇಷವಾಗಿ ಮಹಿಳೆಯರ ಮೇಲೆ ಪ್ರಭಾವ ಬೀರುತ್ತವೆ. ನಿತೀಶ್ ಕುಮಾರ್ ಮತ್ತು ಸಂಜಯ್ ನಿಶಾದ್ ಈ ಬಗ್ಗೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

Comments are closed.