

ಬೆಂಗಳೂರು: ಹೈಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ನಂತರ ಭೈರತಿ ಬಸವರಾಜ್ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆಯಾಗಿದ್ದಾರೆ. ಲೈವ್ ಲೊಕೆಷನ್ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದೆ ಎಂದು ತನಿಖಾ ಮೂಲಗಳು ತಿಳಿಸಿದೆ.
ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಭೈರತಿ ಬಸವರಾಜ್ ಬಂದಿದ್ದು, ಅಲ್ಲಿಂದಲೇ ನಾಪತ್ತೆಯಾಗಿದ್ದಾರೆ. ಬಸವರಾಜ್ ಅವರು ಉಳಿದುಕೊಂಡಿರುವ ಜಾಗಕ್ಕೆ ಸಿಐಡಿ ಅಧಿಕಾರಿಗಳ ತಂಡ ಹೋಗಿದ್ದು, ಅಲ್ಲಿನ ಸಿಸಿಟಿವಿ ಯಾವ ರಸ್ತೆಯ ಮೂಲಕ ಯಾವ ಕಡೆಗೆ ಹೋಗಿದ್ದಾರೆ ಎನ್ನುವ ಮಾಹಿತಿಯನ್ನು ಪರಿಶೀಲನೆ ಮಾಡಿದ್ದಾರೆ.
ಈ ವೇಳೆ ಬೈರತಿ ಬಸವರಾಜ್ ಗೋವಾ ಅಥವಾ ಮಹಾರಾಷ್ಟ್ರಕ್ಕೆ ಹೋಗಿರಬಹುದು ಎನ್ನುವ ಮಾಹಿತಿ ದೊರಕಿದ್ದು, ತನಿಖೆ ಮುಂದುವರಿಸಿದಾಗ ಅಧಿಕಾರಿಗಳಿಗೆ ಬೈರತಿ ಬಸವರಾಜ್ ಲೊಕೆಷನ್ ಕೊನೆಯದಾಗಿ ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆಯಾಗಿದ್ದು, ಅಲ್ಲಿಂದ ಮೊಬೈಲ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾರೆ ಎನ್ನುವುದು ತಿಳಿದು ಬಂದಿದೆ.
ಸಿಐಡಿ ಅಧಿಕಾರಿಗಳ ತನಿಖೆಯಲ್ಲಿ ಆರೋಪಿಗಳ ಜೊತೆಗೆ ಬೈರತಿ ಬಸವರಾಜ್ ಸಂಪರ್ಕದಲ್ಲಿರುವುದು ಪತ್ತೆಯಾಗಿದ್ದು, ಯಾವುದೇ ಕ್ಷಣದಲ್ಲೂ ಮಾಜಿ ಸಚಿವರು ಬಂಧನವಾಗುವ ಸಾಧ್ಯತೆ ಇದೆ.













