ರೈತರಿಗೆ ಸಿಹಿ ಸುದ್ದಿ; ತೊಗರಿ ಬೆಲೆಗೆ ಬೆಂಬಲ ಬೆಲೆ ನಿಗದಿ


ಕಲಬುರಗಿ: ತೊಗರಿಯನ್ನು 2025-26ನೇ ಸಾಲಿನ ಸರಕಾರದ ಬೆಂಬಲ ಬೆಲೆ ಯೋಜನೆಯಡಿ (ಎಮ್‌ಎಸ್‌ಪಿ) ಖರೀದಿ ಮಾಡಲು ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಬಾರಿ ಪ್ರತಿ ಕ್ವಿಂಟಾಲ್ ತೊಗರಿಗೆ ರೂ.8000 ದರವನ್ನು ನಿಗದಿ ಮಾಡಲಾಗಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

ಈ ಕುರಿತು ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿಕೊಂಡಿದ್ದು,
2025-26 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಆದೇಶಿಸಲಾಗಿದೆ.
ಕಲಬುರಗಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್ ತೊಗರಿಗೆ ₹8,000 ದರದಲ್ಲಿ ಪ್ರತಿ ಎಕರೆಗೆ 4 ಕ್ವಿಂಟಾಲ್‌ನಂತೆ ಹಾಗೂ FRUITS ತಂತ್ರಾಂಶದಲ್ಲಿ ಲಭ್ಯವಿರುವಂತೆ ರೈತರು ತೊಗರಿ ಬೆಳೆದ ಜಮೀನಿನ ವಿಸ್ತೀರ್ಣಕ್ಕೆ ಅನುಗುಣವಾದ ಪ್ರಮಾಣದಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ.
ತೊಗರಿ ಖರೀದಿಗೆ ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿಯನ್ನು ರಾಜ್ಯ ಖರೀದಿ ಸಂಸ್ಥೆಗಳಾಗಿ ನೇಮಿಸಲಾಗಿದೆ.
ಜಿಲ್ಲೆಯಲ್ಲಿ ಒಟ್ಟು 141 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು (PACS) ಮತ್ತು FPO ಗಳ ಮೂಲಕ ಪ್ರತಿ ಖರೀದಿ ಕೇಂದ್ರಗಳಲ್ಲಿ POS ಯಂತ್ರಗಳಲ್ಲಿ ರೈತರ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆಯಲ್ಲಿ UIDAI ಬಯೋ ಮೆಟ್ರಿಕ್ ಪಡೆಯುವುದು ಕಡ್ಡಾಯವಾಗಿದೆ.
ನೋಂದಣಿ ಕಾರ್ಯವು ಮಾರ್ಚ್ 06, 2026 ರವರೆಗೆ ನಡೆಯಲಿದೆ. ರೈತರಿಗೆ DBT ಪೋರ್ಟಲ್ ಮೂಲಕ ಪಾವತಿಸಲಾಗುವುದು. ಬೆಂಬಲ ಬೆಲೆ ದರಕ್ಕಿಂತ ಹೆಚ್ಚಿನ ಮಾರುಕಟ್ಟೆ ಧಾರಣೆ ಇದ್ದಲ್ಲಿ, NAFED ಸಂಸ್ಥೆಯು ಬೆಂಬಲ ಬೆಲೆಗಿಂತಲೂ ಹೆಚ್ಚಿನ ದರದಲ್ಲಿ ಖರೀದಿಸಲಿದೆ.
ರೈತರು ತಮ್ಮ ಸಮೀಪದ PACS, FPO ಮತ್ತು ಜಿಲ್ಲೆಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿರುವ ತೊಗರಿ ಖರೀದಿ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ,
- ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ಕಲಬುರಗಿ (KSCMF): ಮೊ. ಸಂಖ್ಯೆ 9449864446
- ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ದಿ ಮಂಡಳಿ ಕಲಬುರಗಿ (KSPAML): ಮೊ. ಸಂಖ್ಯೆ 9964474444.

Comments are closed.