Mangaluru : ಮಂಗಳೂರಲ್ಲಿ ಪೈಶಾಚಿಕ ಕೃತ್ಯ – ಜೇನು ಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿ ಮೇಲೆ 17ದಿನ ಅತ್ಯಾಚಾರ!!

Mangaluru : ಜೇನು ಕೃಷಿ ಕಲಿಸುವುದಾಗಿ ಹೇಳಿಕೊಂಡಿದ್ದ ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ಹೌದು, ಮಂಗಳೂರಿನ (Mangaluru) ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಅಮಾನುಷ ಘಟನೆ ನಡೆದಿದೆ. ಜೇನುಕೃಷಿ ಕಲಿಸುವ ನೆಪದಲ್ಲಿ ಬೆಳಗಾವಿ ಮೂಲದ ಅಪ್ರಾಪ್ತೆಯನ್ನು ಮನೆಯಲ್ಲಿ ಇರಿಸಿಕೊಂಡಿದ್ದ ಆರೋಪಿ, 17 ದಿನಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನಲಾಗಿದೆ. ಸಧ್ಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅರೆಸ್ಟ್ ಮಾಡಲಾಗಿದೆ.
ಸಂತ್ರಸ್ತ ಬಾಲಕಿಯನ್ನು ಜೇನುಕೃಷಿ ತರಬೇತಿ ನೀಡುವುದಾಗಿ ಹೇಳಿ ಆರೋಪಿ ಅಬ್ದುಲ್ ಗಫೂರ್ ತನ್ನ ಮನೆಯಲ್ಲಿ ಇರಿಸಿಕೊಂಡಿದ್ದ. ಪೋಷಕರು ಮಗಳನ್ನು ಸುಮಾರು ಎರಡು ತಿಂಗಳ ಹಿಂದೆ ಆರೋಪಿಯ ಮನೆಗೆ ಬಿಟ್ಟು ಹೋಗಿದ್ದು, ಈ ಅವಧಿಯಲ್ಲಿ ಡಿಸೆಂಬರ್ 2ರಿಂದ 19ರವರೆಗೆ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ಮಾಹಿತಿ ತಿಳಿದ ಪೊಲೀಸರು, ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಹಾಗೂ ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
Comments are closed.