Home Latest Sports News Karnataka siddaramaiah: ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ

siddaramaiah: ಒಲಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ಬಹುಮಾನ: ಸಿಎಂ

Hindu neighbor gifts plot of land

Hindu neighbour gifts land to Muslim journalist

siddaramaiah: ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ.

ಭಾನುವಾರ (ಡಿ.21) ಒಲಂಪಿಕ್ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ಒಲಂಪಿಕ್ಸ್ ಸಂಸ್ಥೆ ವತಿಯಿಂದ ನೀಡಲಾಗುತ್ತಿರುವ ಕರ್ನಾಟಕ ಒಲಂಪಿಕ್ 2025 ಪ್ರಶಸ್ತಿಗೆ ಭಾಜನರಾಗಿರುವ ಕ್ರೀಡಾ ಸಾಧಕರಿಗೆ ಅಭಿನಂದನೆಗಳು. ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 6 ಕೋಟಿ ರೂ.ಗಳ ನಗದು ಬಹುಮಾನ ನೀಡಲಾಗುವುದು. ಅಂತೆಯೇ ಬೆಳ್ಳಿ ಪದಕ ಪಡೆದರೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಗೆದ್ದರೆ 3 ಕೋಟಿ ರೂ. ನಗದು ಬಹುಮಾನ ನೀಡಲಾಗುವುದು. ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ನಮ್ಮ ಸರ್ಕಾರ ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿದೆ. ಕಠಿಣ ಪರಿಶ್ರಮ ಹಾಗೂ ಗುರಿಸಾಧನೆ ಮಾಡುವ ಛಲವಿದ್ದರೆ, ಕರ್ನಾಟಕದ ಕ್ರೀಡಾಪಟು ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆಲ್ಲಬಹುದಾಗಿದೆ. ಕರ್ನಾಟಕದ ಕ್ರೀಡಾಪಟುಗಳು ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆಲ್ಲುವರೆಂಬ ವಿಶ್ವಾಸವಿದೆ. ಕ್ರೀಡೆಯಲ್ಲಿ ಕ್ರೀಡಾಸ್ಪೂರ್ತಿ ಅತ್ಯಂತ ಅವಶ್ಯಕ. ಗುರಿಸಾಧನೆಯೇ ಜೀವನದ ಧ್ಯೇಯವಾಗಬೇಕು. ಕ್ರೀಡಾಪಟುಗಳಿಗೆ ಸರ್ಕಾರದ ನೇಮಕಾತಿಯಲ್ಲಿಯೂ ಮೀಸಲಾತಿಯನ್ನು ಒದಗಿಸಿದೆ. ಪೊಲೀಸ್ ಹಾಗೂ ಅರಣ್ಯ ಇಲಾಖೆಯಲ್ಲಿ ಶೇ.3ರಷ್ಟು ಹಾಗೂ ಇನ್ನುಳಿದ ಇಲಾಖೆಗಳಲ್ಲಿ ಶೇ.2ರಷ್ಟು ಕ್ರೀಡಾಪಟುಗಳಿಗೆ ಮೀಸಲಾತಿ ನೀಡಲಾಗುವುದು. ಜನವರಿಯಲ್ಲಿ ಕ್ರೀಡಾಮೀಸಲಾತಿಯಡಿಯಲ್ಲಿ ಸರ್ಕಾರಿ ಉದ್ಯೋಗದ ನೇಮಕಾತಿಗೆ ಸರ್ಕಾರಿ ಆದೇಶವನ್ನು ಹೊರಡಿಸಲಾಗುತ್ತದೆ. ಆದ್ದರಿಂದ ಹೆಚ್ಚಿನ ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಭಾಗಿಯಾಗಬೇಕೆಂದು ಹೇಳಿದರು.