Home National Nithin Nabin: ಬಿಜೆಪಿ ಕಾರ್ಯಾಧ್ಯಕ್ಷ ನಿತಿನ್, ಶಾಸಕ ಸ್ಥಾನಕ್ಕೆ ರಾಜೀನಾಮೆ? ರಾಜ್ಯಸಭೆಯತ್ತ ಮುಖ!!

Nithin Nabin: ಬಿಜೆಪಿ ಕಾರ್ಯಾಧ್ಯಕ್ಷ ನಿತಿನ್, ಶಾಸಕ ಸ್ಥಾನಕ್ಕೆ ರಾಜೀನಾಮೆ? ರಾಜ್ಯಸಭೆಯತ್ತ ಮುಖ!!

Hindu neighbor gifts plot of land

Hindu neighbour gifts land to Muslim journalist

Nithin Nabin: ಬಿಜೆಪಿ (BJP)ಯಲ್ಲಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಮುನ್ನ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ಯುವ ನಾಯಕ ನಿತಿನ್ ನಬಿನ್ ( Nitin Nabin) ಅವರನ್ನು ಆಯ್ಕೆ ಮಾಡಲಾಗಿದೆ. ಇದೀಗ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ವಿಚಾರ ಮುನ್ನಲೆಗೆ ಬಂದಿದೆ.

ಹೌದು, ಇತ್ತೀಚೆಗಷ್ಟೇ ಬಿಜೆಪಿಯ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿಹಾರದ ನಿತಿನ್‌ ನಬೀನ್‌ ಅವರಿಗೆ ರಾಜ್ಯಸಭೆಗೆ ಪದೋನ್ನತಿ ನೀಡಲು ಪಕ್ಷದ ಹೈಕಮಾಂಡ್‌ ಚಿಂತನೆ ನಡೆಸುತ್ತಿದ್ದು, ಅದಕ್ಕಾಗಿ ಬಂಕಿಪುರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಮುಂದಾಗಿದೆ ಎಂದು ವರದಿಯಾಗಿದೆ. 

ಸಧ್ಯ ನಿತಿನ್ ನಬೀನ್ ಅವರು ಬಿಹಾರ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದಾರೆ. ಮುಂದಿನ ತಿಂಗಳು ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ನತಿನ್‌ ಅಲಂಕರಿಸುವವರಿದ್ದಾರೆ ಎನ್ನಲಾಗುತ್ತಿದ್ದು, ಅದಕ್ಕೂ ಮೊದಲು ಈ ಬದಲಾವಣೆಯಾಗುವ ನಿರೀಕ್ಷೆಯಿದೆ. ಇದಕ್ಕೂ ಮೊದಲು ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ರಾಜ್ಯಸಭೆಗೆ ಹೋಗಲಿದ್ದಾರೆ. ಈ ಮೂಲಕ, ಬಿಜೆಪಿಯ ರಾಷ್ಟ್ರಾಧ್ಯಕ್ಷರಾಗಿರುವವರು ರಾಜ್ಯಸಭಾ ಸದಸ್ಯರೂ ಆಗಿರುವ ಸಂಪ್ರದಾಯವನ್ನು ಮುಂದುವರೆಸಲಿದ್ದಾರೆ. ಪ್ರಸ್ತುತ ಪಕ್ಷದ ಅಧ್ಯಕ್ಷರಾಗಿರುವ ಜೆ.ಪಿ. ನಡ್ಡಾ ಅವರೂ ರಾಜ್ಯಸಭೆಯ ಚುನಾಯಿತ ಸದಸ್ಯರಾಗಿದ್ದಾರೆ.