Home Health Menstrual leave: ಶಿಕ್ಷಕಿಯರಿಗೆ ಮಾಸಿಕ 1 ದಿನ ವೇತನ ಸಹಿತ ಋತುಚಕ್ರ ರಜೆ ಮಂಜೂರು

Menstrual leave: ಶಿಕ್ಷಕಿಯರಿಗೆ ಮಾಸಿಕ 1 ದಿನ ವೇತನ ಸಹಿತ ಋತುಚಕ್ರ ರಜೆ ಮಂಜೂರು

Hindu neighbor gifts plot of land

Hindu neighbour gifts land to Muslim journalist

Menstrual leave: ರಾಜ್ಯ ಸರ್ಕಾರದ ಮಹಿಳಾ ಶಿಕ್ಷಕಿಯರಿಗೆ ಮಾಸಿಕ 1 ದಿನ ವೇತನ ಸಹಿತ ಋತುಚಕ್ರ ರಜೆಯ ಸೌಲಭ್ಯವನ್ನು ಮಂಜೂರು ಮಾಡುವ ಕುರಿತು ಆದೇಶ ಹೊರಡಿಸಲಾಗಿದೆ.

ರಾಜ್ಯಾಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರ ದಿನಾಂಕ: 15.11.2025ರ ಮನವಿಯಲ್ಲಿ ಕಾರ್ಮಿಕ ಇಲಾಖೆಯ ಆದೇಶದಂತೆ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಮಹಿಳಾ ಶಿಕ್ಷಕಿಯರಿಗೆ 1 ದಿನ ವೇತನ ಸಹಿತ ಋತುಚಕ್ರ ರಜೆಯ ಆದೇಶವನ್ನು ಹೊರಡಿಸಬೇಕಾಗಿ ಕೋರಿರುತ್ತಾರೆ.

02.12.2025ರಲ್ಲಿ, ಸರ್ಕಾರವು ಮಹಿಳಾ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಷರತ್ತಿಗೊಳಪಟ್ಟು ಮಂಜೂರು ಮಾಡಿರುತ್ತದೆ. ಅದರಂತೆ ಎಲ್ಲ ಅರ್ಹ ಶಿಕ್ಷಕಿಯರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಉಲ್ಲೇಖಿತ (2)ರ ಸರ್ಕಾರದ ಆದೇಶದಲ್ಲಿನ ಷರತ್ತಿಗೊಳಪಟ್ಟು ಮಂಜೂರು ಮಾಡಲು ನಿಯಮಾನುಸಾರ ಕ್ರಮವಹಿಸುವಂತೆ ನಿರ್ದೇಶಿಸಲಾಗಿದೆ.