Home ದಕ್ಷಿಣ ಕನ್ನಡ Mangaluru: ಮಂಗಳೂರು ಕಂಬಳ: 100 ಮೀ ದೂರವನ್ನು 8.69 ಸೆಕೆಂಡ್‌ನಲ್ಲಿ ಕ್ರಮಿಸಿದ ಕೋಣಗಳು

Mangaluru: ಮಂಗಳೂರು ಕಂಬಳ: 100 ಮೀ ದೂರವನ್ನು 8.69 ಸೆಕೆಂಡ್‌ನಲ್ಲಿ ಕ್ರಮಿಸಿದ ಕೋಣಗಳು

Hindu neighbor gifts plot of land

Hindu neighbour gifts land to Muslim journalist

Mangaluru: ಕಂಬಳದ ಅತಿ ವೇಗದ ಓಟದ ದಾಖಲೆಯನ್ನು ಮಂಗಳೂರು ರಾಮ ಲಕ್ಷ್ಮಣ ಜೋಡುಕರೆ ಕಂಬಳದ ನೇಗಿಲು ಹಿರಿಯ ವಿಭಾಗದ ಫೈನಲ್ ಸ್ಪರ್ಧೆಯಲ್ಲಿ 80 ಬಡಗಬೆಟ್ಟು ಕಲ್ಲಪಾಪು ಶ್ರೀಕಾ ಸಂದೀಪ್ ಶೆಟ್ಟಿ ಅವರ ಕೋಣಗಳ ಜೋಡಿ ಭಾನುವಾರ ಮುರಿದಿದೆ.

ಸಂಸದ ಕ್ಯಾ.ಬ್ರಿಜೇಶ್‌ ಚೌಟ ನೇತೃತ್ವದಲ್ಲಿ ನಗರದ ಬಂಗ್ರಕೂಳೂರಿನ ಗೋಲ್ಡ್‌ ಫಿಂಚ್‌ ಸಿಟಿಯಲ್ಲಿ ನಡೆದ ಕಂಬಳದಲ್ಲಿ ಶ್ರೀಕಾ ಸಂದೀಪ್ ಶೆಟ್ಟಿ ಮಾಲಿಕತ್ವದ ಗಾಂಧಿ ಮೈದಾನ ಸಂತು ಮತ್ತು ಸುರತ್ಕಲ್ ಪಾಂಚ ಕೋಣಗಳನ್ನು ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್‌ ಕುಮಾರ್ ಓಡಿಸಿದ್ದರು. ಆ ಕೋಣಗಳು 125 ಮೀ ಉದ್ದವನ್ನು 10.87 ಸೆಕೆಂಡ್‌ಗಳಲ್ಲಿ ಕ್ರಮಿಸಿದವು. ಅವು 100 ಮೀ ದೂರವನ್ನು 8.69 ಸೆಕೆಂಡ್‌ಗಳಲ್ಲಿ ಕ್ರಮಿಸಿದಂತಾಗಿದೆ.ಮಂಗಳೂರು ಕಂಬಳದ ಸೆಮಿಫೈನಲ್‌ನಲ್ಲಿ ಗಾಂಧಿ ಮೈದಾನ ಸಂತು ಮತ್ತು ಸುರತ್ಕಲ್ ಪಾಂಚ ಕೋಣಗಳ ಜೋಡಿ 125 ಮೀಟರ್ ದೂರವನ್ನು 11.06 ಸೆಕೆಂಡ್ ನಲ್ಲಿ ಕ್ರಮಿಸಿದ್ದು ಈ ಋತುವಿನ ಅತಿ ವೇಗದ ಓಟ ಎಂದು ದಾಖಲಾಗಿತ್ತು. ಫೈನಲ್‌ನಲ್ಲಿ ಅದೇ ಕೋಣಗಳು ಹಿಂದಿನ ಎಲ್ಲಾ ದಾಖಲೆಗಳನ್ನು ಅಳಿಸಿಹಾಕಿದವು.