Home latest Ballary : ಬಳ್ಳಾರಿ ಘರ್ಷಣೆ ಪ್ರಕರಣ – ಅಧಿಕಾರ ಪಡೆದ ಒಂದೇ ದಿನದಲ್ಲಿ ಸಸ್ಪೆಂಡ್ ಆಗಿದ್ದ...

Ballary : ಬಳ್ಳಾರಿ ಘರ್ಷಣೆ ಪ್ರಕರಣ – ಅಧಿಕಾರ ಪಡೆದ ಒಂದೇ ದಿನದಲ್ಲಿ ಸಸ್ಪೆಂಡ್ ಆಗಿದ್ದ SP ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ!!

Hindu neighbor gifts plot of land

Hindu neighbour gifts land to Muslim journalist

Ballary : ಗಣಿ ನಾಡು ಬಳ್ಳಾರಿಯಲ್ಲಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿ, ಅಚಾನಕ್ಕಾಗಿ ಸಿಡಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದರು. ಈ ಬೆನ್ನಲ್ಲೇ ಬಳ್ಳಾರಿ ಎಸ್‌ಪಿ ಪವನ್ ನೆಜ್ಜೂರು ಅವರನ್ನು ರಾಜ್ಯ ಸರ್ಕಾರವು ಅಮಾನತು ಮಾಡಿತ್ತು. ಆದರೆ ಇದೀಗ ಎಸ್ಪಿ ಪವನ್ ನಿಜ್ಜೂರು ಅವರು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

ಹೌದು, ಬಳ್ಳಾರಿ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇದನ್ನು ರಾಜ್ಯ ಸರ್ಕಾರವೂ ಸಹ ಗಂಭೀರವಾಗಿ ಪರಿಗಣಿಸಿದೆ. ಇದರಿಂದ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರು ಅವರನ್ನ ಅಮಾನತು ಮಾಡಲಾಗಿದೆ. ರಾಜಕೀಯ ಕಿತ್ತಾಟದಿಂದ ಬಳ್ಳಾರಿ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ಒಂದೇ ದಿನದಲ್ಲಿ ಪವನ್ ನೆಜ್ಜೂರು ಅವರನ್ನು ಸಸ್ಪೆಂಡ್ ಮಾಡಲಾಗಿದೆ. ಇದೀಗ ಮಾತ್ರೆ ನುಂಗಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಸ್ನೇಹಿತನ ಫಾರ್ಮ್ ಹೌಸ್ ನಲ್ಲಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗುತ್ತಿದೆ ತುಮಕೂರು ಜಿಲ್ಲೆಯ ಶಿರದ ಬರಗೂರಿನ ಫಾರ್ಮರ್ಸ್ ನಲ್ಲಿ ಪವನ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಸದ್ಯ ಆಸ್ಪತ್ರೆಯಲ್ಲಿ ಪವನ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.