Home Technology Runway Cleaning Vehicle: ಬೆಂಗಳೂರಲ್ಲೇ ತಯಾರಾಯ್ತು ದೇಶದ ಮೊದಲ ರನ್‌ವೇ ಕ್ಲೀನಿಂಗ್ ವೆಹಿಕಲ್

Runway Cleaning Vehicle: ಬೆಂಗಳೂರಲ್ಲೇ ತಯಾರಾಯ್ತು ದೇಶದ ಮೊದಲ ರನ್‌ವೇ ಕ್ಲೀನಿಂಗ್ ವೆಹಿಕಲ್

Hindu neighbor gifts plot of land

Hindu neighbour gifts land to Muslim journalist

Runway Cleaning Vehicle: ತಯಾರಿಕೆಯಲ್ಲಿ ತೊಡಗಿರುವ ಬೆಂಗಳೂರು ಮೂಲದ ಆನ್ ಲಾನ್ ಟೆಕ್ನಾಲಜಿ ಸಲ್ಯೂಷನ್ಸ್ ಲಿಮಿಟೆಡ್ ಅಭಿವೃದ್ಧಿಪಡಿಸಿರುವ ವಿಮಾನ ನಿಲ್ದಾಣ ರನ್ ವೇ ಸ್ವಚ್ಛತಾ ವಾಹನವನ್ನ (Runway Cleaning Vehicle) ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್‌ ಅವರು ಸೋಮವಾರ ನೋಯ್ಡಾ ಇಂಟರ್ ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ ಗೆ (NIAL) ಹಸ್ತಾಂತರಿಸಿದರು.

ಭಾರತದಲ್ಲಿ (India) ಮೊದಲ ಬಾರಿಗೆ ದೇಶೀಯವಾಗಿ ತಯಾರಿಕೆಯಾದ ರನ್ ವೇ ಸ್ವಚ್ಛತಾ ವಾಹನ ಇದಾಗಿದೆ. ಭಾರತದ ಸರ್ಕಾರದ ‘ಮೇಕ್ ಇನ್ ಇಂಡಿಯಾ’ ಉಪಕ್ರಮದಡಿ ಸ್ವಿಟ್ಜರ್‌ಲ್ಯಾಂಡ್‌ನ ಮೆಸರ್ಸ್ ಬುಕರ್ ಮುನಿಸಿಪಲ್ ಸಹಯೋಗದಲ್ಲಿ ದೊಡ್ಡಬಳ್ಳಾಪುರದ (Doddaballapura) ಆದಿನಾರಾಯಣ ಹೊಸಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವ ಘಟಕದಲ್ಲಿ ಜೋಡಣೆಗೊಂಡು ತಯಾರಾಗಿರುವ ಈ ಮಾದರಿಯ ಎರಡು ವಾಹನಗಳ ಕೀಲಿಕೈಗಳನ್ನು ನೋಯ್ಡಾ ವಿಮಾನ ನಿಲ್ದಾಣದ ಪ್ರತಿನಿಧಿ ಪ್ರದೀಪ್ ರಾಣಾ ಅವರಿಗೆ ನೀಡಿದರು.