Home latest Land record: `ಮೊಬೈಲ್’ನಲ್ಲೇ ನಿಮ್ಮೂರಿನ `ಕಂದಾಯ ನಕ್ಷೆ’ ನೋಡುವ ವಿಧಾನ ಇಲ್ಲಿದೆ

Land record: `ಮೊಬೈಲ್’ನಲ್ಲೇ ನಿಮ್ಮೂರಿನ `ಕಂದಾಯ ನಕ್ಷೆ’ ನೋಡುವ ವಿಧಾನ ಇಲ್ಲಿದೆ

Hindu neighbor gifts plot of land

Hindu neighbour gifts land to Muslim journalist

Land record: ಕಂದಾಯ ಇಲಾಖೆಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಆಯಾ ಊರಿನ ವ್ಯಾಪ್ತಿಯ ನಕ್ಷೆಯನ್ನು ಆನ್ ಲೈನ್ ನಲ್ಲಿ ಡೌನ್ ಲೋಡ್ ಮಾಡಲು ಅವಕಾಶ ನೀಡಲಾಗುತ್ತಿದೆ. ಕಂದಾಯ ಇಲಾಖೆಯು ಕರ್ನಾಟಕದ ಜನರಿಗೆ ಪ್ರತಿ ಹಳ್ಳಿಯ ಕಂದಾಯ ನಕ್ಷೆಯನ್ನು ಆನ್ ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳೋದಕ್ಕೆ ಅವಕಾಶ ನೀಡಲಾಗಿದೆ.

ಇದಕ್ಕಾಗಿ ನೀವು https://landrecords.karnataka.gov.in/service3/ ಗೆ ಭೇಟಿ ನೀಡಿ.ರಾಜ್ಯ ಸರಕಾರದ ಕಂದಾಯ ಇಲಾಖೆಯ ಈ ಅಧಿಕೃತ ಜಾಲತಾಣ ಭೇಟಿ ಮಾಡಿ ನಿಮ್ಮ ಜಮೀನಿನ ಕಂದಾಯ ನಕ್ಷೆಯನ್ನು ಡೌನ್ಲೋಡ್ ಮಾಡಿಕೊಳ್ಳಬವುದು. ಈ ನಕ್ಷೆಯಲ್ಲಿ ನಿಮ್ಮ ಗ್ರಾಮದಲ್ಲಿ ಒಟ್ಟು ಎಷ್ಟು ಸರ್ವೆ ನಂಬರ್ ಇವೆ ಅದರ ಗಡಿ, ಕಾಲುದಾರಿ, ಬಂಡಿದಾರಿ ಎಲ್ಲಿ ಎಲ್ಲಿ ಬರುತ್ತದೆ, ಕಾಲುವೆ, ,ತೆರೆದ ಬಾವಿ, ಗುಡ್ಡ, ಮನೆ, ಇತ್ಯಾದಿ ಸಂಪೂರ್ಣ ಮಾಹಿತಿ ನೋಡಬಹುದು.ಈ ಹಂತ ಅನುಸರಿಸಿ, ಕುಳಿತಲ್ಲೇ ಕಂದಾಯ ನಕ್ಷೆ ಡೌನ್ ಲೋಡ್ ಮಾಡಿ

https://landrecords.karnataka.gov.in/service3/ ಈ ಲಿಂಕ್ ಕ್ಲಿಕ್ ಮಾಡಿ, ಕಂದಾಯ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.ಈ ಮೇಲ್ಕಂಡ ಲಿಂಕ್ ಕ್ಲಿಕ್ ಮಾಡಿದ ನಂತ್ರ ನಿಮಗೆ ನಿಮ್ಮ ಜಿಲ್ಲೆ, ತಾಲ್ಲೂಕು, ಹೋಬಳಿ ಹಾಗೂ ಗ್ರಾಮದ ಆಯ್ಕೆಯನ್ನು ತೋರಿಸುತ್ತದೆ ಅದನ್ನು ಆಯ್ಕೆ ಮಾಡಿಕೊಳ್ಳಿ.ಇದಾದ ಬಳಿಕ ನಿಮ್ಮ ಹೋಬಳಿಯ ಸಂಪೂರ್ಣ ಹಳ್ಳಿಗಳ ಕಂದಾಯ ನಕ್ಷೆಯನ್ನು ಪಿಡಿಎಫ್ ಪಾರ್ಮೆಟ್ ನಲ್ಲಿ ತೋರಿಸಲಿದೆ.ನೀವು ನಿಮಗೆ ಬೇಕಾದ ಹಳ್ಳಿಯ ಕಂದಾಯ ನಕ್ಷೆಯನ್ನು ಪಕ್ಕದಲ್ಲಿ ಕಾಣುವಂತ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.