Home News Mangaluru: ಕರ್ನಾಟಕ ಕರಾವಳಿ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

Mangaluru: ಕರ್ನಾಟಕ ಕರಾವಳಿ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

Hindu neighbor gifts plot of land

Hindu neighbour gifts land to Muslim journalist

Mangaluru: ಕರ್ನಾಟಕದ ಕರಾವಳಿ ಭಾಗವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಹಬ್ ಆಗಿ ಪರಿವರ್ತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಸಭೆಯ ನಂತರ ಮಾತನಾಡಿದ ಅವರು, ಈ ಭಾಗದ ನೈಸರ್ಗಿಕ ಸಂಪತ್ತನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಈ ಹಿಂದಿನ ಸರ್ಕಾರಗಳು ಹಾಗೂ ಪ್ರಸ್ತುತ ಸರ್ಕಾರ ಕೂಡ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡರು.

ಮಂಗಳೂರಿನ ಯುವಜನತೆ ಬುದ್ಧಿವಂತರು ಮತ್ತು ಪ್ರಜ್ಞಾವಂತರಾಗಿದ್ದಾರೆ. ಆದರೆ ಇಲ್ಲಿ ಸರಿಯಾದ ಅವಕಾಶಗಳಿಲ್ಲದೆ ಉದ್ಯೋಗಕ್ಕಾಗಿ ಮುಂಬೈ, ದುಬೈ ಮತ್ತು ಬೆಂಗಳೂರಿನಂತಹ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ನಮ್ಮ ಗುರಿ ಈ ವಲಸೆಯನ್ನು ತಪ್ಪಿಸುವುದಾಗಿದೆ. ವಿದೇಶಗಳಲ್ಲಿರುವ ಇಲ್ಲಿನ ಉದ್ಯಮಿಗಳು ತಮ್ಮ ಸ್ವಂತ ಊರಿಗೆ ಮರಳಿ ಹೂಡಿಕೆ ಮಾಡಲು ಉತ್ಸುಕರಾಗಿದ್ದಾರೆ. ಅವರಿಗೆ ಪೂರಕವಾದ ವಾತಾವರಣ ನಿರ್ಮಿಸಿದರೆ ಸ್ಥಳೀಯವಾಗಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ’ ಎಂದು ಡಿ.ಕೆ. ಶಿವಕುಮಾರ್ ಆಶಯ ವ್ಯಕ್ತಪಡಿಸಿದರು.

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಅಡ್ಡಿಯಾಗಿರುವ ಸಿ.ಆರ್.ಜೆಡ್ (CRZ) ನಿಯಮಗಳು, ರಕ್ಷಣೆ (Defense) ಮತ್ತು ಕೋಸ್ಟಲ್ ಪೊಲೀಸ್ ಇಲಾಖೆಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗಿದೆ. ಉದ್ಯಮಿಗಳು ಮತ್ತು ಸಾರ್ವಜನಿಕರು ತಮ್ಮ ಸಲಹೆಗಳನ್ನು ನೀಡಬಹುದು. ಸರ್ಕಾರವು ಹೂಡಿಕೆದಾರರಿಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಡಿಸಿಎಂ ಭರವಸೆ ನೀಡಿದರು.