Home Crime ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಕೊಲೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌

ಬೆಂಗಳೂರಿನಲ್ಲಿ ಮಂಗಳೂರು ಮೂಲದ ಟೆಕ್ಕಿ ಕೊಲೆ ಕೇಸ್‌ಗೆ ಬಿಗ್‌ ಟ್ವಿಸ್ಟ್‌

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಹತ್ಯೆ (34) ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಸಂಬಂಧ ಭೀಕರ ಸತ್ಯ ಹೊರಬಂದಿದೆ. ಇದು ಕೊಲೆ ಪ್ರಕರಣವಲ್ಲ, ಹತ್ಯೆಗೂ ಮುನ್ನ ಸಂತ್ರಸ್ತೆ ಮೇಲೆ ಆರೋಪಿ ಅತ್ಯಾಚಾರ ಮಾಡಿರುವ ಕುರಿತು ಸಾಧ್ಯತೆ ಇದೆ ಎಂದು ಪೊಲೀಸರಿಗೆ ಅನುಮಾನ ವ್ಯಕ್ತವಾಗಿದೆ.

ರಾಮಮೂರ್ತಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದ ಆರೋಪಿ ಕೇರಳ ಮೂಲದ ಕರ್ನಲ್‌ ಕುರೈ (18) ವಿರುದ್ಧ ಈಗಾಗಲೇ ಕೊಲೆ ಪ್ರಕರಣದ ಜೊತೆಗೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದಾಖಲು ಮಾಡಿ ತನಿಖೆ ಮಾಡಲಾಗುತ್ತಿದೆ. ಈತನ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಪ್ರಕರಣದ ವಿವರ: ಪೊಲೀಸ್‌ ತನಿಖೆಯ ಪ್ರಕಾರ ವರದಿಯಾಗಿರುವುದೇನೆಂದರೆ, ಜ.3 ರ ರಾತ್ರಿ 9 ಗಂಟೆ ಸರಿ ಸುಮಾರಿಗೆ ಕರ್ನಲ್‌ ಕುರೈ ಅಪಾರ್ಟ್‌ಮೆಂಟ್‌ನ ಸ್ಲೈಡಿಂಗ್‌ ವಿಂಡೋ ಮೂಲಕ ಶರ್ಮಿಳಾ ಮನೆಯೊಳಗೆ ನುಗ್ಗಿದ್ದು, ಆ ಸಂದರ್ಭದಲ್ಲಿ ಶರ್ಮಿಳಾ ಮನೆಯಲ್ಲಿ ಒಬ್ಬರೇ ಇದ್ದರು. ಒಳಗೆ ಬಂದ ಆರೋಪಿ, ಶರ್ಮಿಳಾಲ ಮೇಲೆ ದೌರ್ಜನ್ಯಕ್ಕೆ ಯತ್ನ ಮಾಡಿದ್ದು, ಇದಕ್ಕೆ ಆಕೆ ತೀವ್ರ ಪ್ರತಿರೋಧ ವ್ಯಕ್ತಪಡಿಸಿದ್ದಆಳೆ. ಪ್ರತಿರೋಧ ವ್ಯಕ್ತ ಪಡಿಸಿದ್ದರೂ ಆರೋಪಿ ಬಲವಂತವಾಗಿ ಆಕೆಯ ಮೇಲೆ ಎರಗಿದ್ದಾನೆ, ಶರ್ಮಿಳಾ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾಳೆ. ತಲೆಗೆ ಪೆಟ್ಟು ಬಿದ್ದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದ ಶರ್ಮಿಳಾಲನ್ನು ಉಸಿರುಗಟ್ಟಿಸಿ ಹತ್ಯೆ ಮಾಡಲಾಗಿರುವ ಕುರಿತು ಅನುಮಾನ ವ್ಯಕ್ತವಾಗಿದೆ.

ಹತ್ಯೆ ಮಾಡಿದ ನಂತರ ಆರೋಪಿ ಸಾಕ್ಷ್ಯ ನಾಶ ಮಾಡುವ ಉದ್ದೇಶದಿಂದ ಕೋಣೆಗೆ ಬೆಂಕಿ ಹಚ್ಚಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ಆರೋಪಿ ಶರ್ಮಿಳಾರ ಮೊಬೈಲ್‌ ಫೋನನ್ನು ತೆಗೆದುಕೊಂಡು ಹೋಗಿದ್ದಾನೆ. ಈ ಮೊಬೈಲ್‌ ಆಧಾರದಿಂದಲೇ ಆರೋಪಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ ಎಂದು ವರದಿಯಾಗಿದೆ.

ತೀವ್ರ ವಿಚಾರಣೆ ಮಾಡಿದ ಪೊಲೀಸರು, ಆಗ ಆರೋಪಿ ಗೊತ್ತಿಲ್ಲ ಎಂದು ಹೇಳಿದ್ದಾನೆ. ಹೀಗಾಗಿ ಸತ್ಯಾಂಶ ತಿಳಿಯಲು ಪೊಲೀಸರು ಎಫ್‌ಎಸ್‌ಎಲ್‌ ಪರೀಕ್ಷೆಗೆ ಮಾದರಿಗಳನ್ನು ಕಳುಹಿಸಿದ್ದಾರೆ.

ಈ ಘಟನೆ ಬೆಳಕಿಗೆ ಬಂದಾಗ ಶಾರ್ಟ್‌ ಸರ್ಕ್ಯೂಟ್‌ನಿಂದ ಉಂಟಾದ ಅವಘಡ ಎನ್ನಲಾಗಿದೆ. ಆದರೆ ಮರಣೋತ್ತರ ಪರೀಕ್ಷೆ ನಂತರ ಇದೊಂದು ಪೂರ್ವನಿಯೋಜಿತ ಕೃತ್ಯ ಎನ್ನುವುದು ತಿಳಿದು ಬಂದಿದೆ. ಆರೋಪಿ ಶರ್ಮಿಳಾರನ್ನು ಒನ್‌ ಸೈಡ್‌ ಲವ್‌ ಮಾಡುತ್ತಿದ್ದ ಎನ್ನಲಾಗಿದೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಎಫ್‌ಎಸ್‌ಎಲ್‌ ವರದಿ ಬಂದ ನಂತರ ಪ್ರಕರಣದ ಕುರಿತ ನಿಜಾಂಶ ತಿಳಿದು ಬರಲಿದೆ ಎಂದು ಪೊಲೀಸರು ತಿಳಿಸಿರುವುದಾಗಿ ವರದಿಯಾಗಿದೆ.