Home Death Bhimanna Khandre: ಶತಾಯುಷಿ, ಲೋಕನಾಯಕ ಭೀಮಣ್ಣ ಖಂಡ್ರೆ ವಿಧಿವಶ!!

Bhimanna Khandre: ಶತಾಯುಷಿ, ಲೋಕನಾಯಕ ಭೀಮಣ್ಣ ಖಂಡ್ರೆ ವಿಧಿವಶ!!

Hindu neighbor gifts plot of land

Hindu neighbour gifts land to Muslim journalist

Bhimanna Khandre: ಆರು ದಶಕಗಳಿಗೂ ಹೆಚ್ಚು ಕಾಲ ಸಾರ್ವಜನಿಕ ಜೀವನದಲ್ಲಿ ಜನಪರ ಕಾರ್ಯಕ್ರಮಗಳ ಮೂಲಕ ಜನಪ್ರಿಯರಾಗಿದ್ದ, ಮಾಜಿ ಸಚಿವ, ವೀರಶೈವ ಮಹಾಸಭಾ ಗೌರವ ಅಧ್ಯಕ್ಷರಾಗಿದ್ದ ಶತಾಯುಷಿ ಡಾ. ಭೀಮಣ್ಣ ಖಂಡ್ರೆ ವಿಧಿವಶರಾಗಿದ್ದಾರೆ. 

ಕಳೆದ 10-12 ದಿನಗಳಿಂದ ವಯೋಸಹಜವಾದ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೀದರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ರಾತ್ರಿ 10.50ರ ಸುಮಾರಿಗೆ ಲಿಂಗೈಕ್ಯರಾಗಿದ್ದಾರೆ

ಲೋಕ ನಾಯಕರೆಂದೇ ಖ್ಯಾತರಾಗಿದ್ದ ಭೀಮಣ್ಣ ಖಂಡ್ರೆ ಅವರದ್ದು ಈ ದೇಶ ಕಂಡ ಅಪರೂಪದ ವ್ಯಕ್ತಿತ್ವ. ಬಾಲ್ಯದಲ್ಲಿಯೇ ಸ್ವಾತಂತ್ರ್ಯ ಚಳವಳಿಯ ಗೀಳು ಹಚ್ಚಿಸಿಕೊಂಡು ದೇಶಕ್ಕಾಗಿ ಹೋರಾಡಿದವರು. ಹೈದರಾಬಾದ್‌ ಕರ್ನಾಟಕ ವಿಮೋಚನಾ ಚಳವಳಿಯಲ್ಲಿ ಹೋರಾಡಿ, ನಿಜಾಂ ಸರ್ಕಾರದ ವಿರುದ್ಧ ಬಂಡಾಯವೆದ್ದು ತಿರಂಗಾ ಧ್ವಜ ಹಾರಿಸಿ ಸೆರೆವಾಸ ಅನುಭವಿಸಿದವರು. ಮುಂದೆ ಡಾ. ಜಯದೇವಿತಾಯಿ ಲಿಗಾಡೆ, ಪ್ರಭುರಾವ್‌ ಕಂಬಳಿವಾಲೆ ಮೊದಲಾದವರು ಸೇರಿ ಕರ್ನಾಟಕ ಏಕೀಕರಣ ಚಳವಳಿಯ ಸಹಭಾಗಿತ್ವ ಪಡೆದು ಬೀದರ್‌ ಜಿಲ್ಲೆಯ ಅನೇಕ ಪ್ರದೇಶಗಳನ್ನು ಕರ್ನಾಟಕದಲ್ಲಿ ಉಳಿಸಿಕೊಂಡವರು. ಗಡಿ ಭಾಗವಾದ ಬೀದರ್‌ ಜಿಲ್ಲೆಯಲ್ಲಿ ಕನ್ನಡ ನಾಡು, ನುಡಿ, ನೆಲ, ಜಲ, ಜನಹಿತಕ್ಕಾಗಿ ಅಹರ್ನಿಶಿ ದುಡಿದ ಧೀಮಂತ ನಾಯಕರು. ರಾಜಕೀಯ ಉದ್ಯಮವಲ್ಲ, ಅದೊಂದು ಸೇವಾವಲಯವೆಂದು ಭಾವಿಸಿದ ಮಹಾಮುತ್ಸದ್ದಿಗಳು.

1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ರಾಜಕೀಯ ಜೀವನಕ್ಕೆ ಪ್ರವೇಶಿಸಿದ್ದ ಭೀಮಣ್ಣ ಖಂಡ್ರೆ ಅವರು 1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದರು. 4 ಬಾರಿ ಶಾಸಕರಾಗಿ, 2 ಬಾರಿ ವಿಧಾನ ಪರಿಷತ್ ಸದಸ್ಯರಾಗಿ, ಎಂ.ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಸಾರಿಗೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಸಹಕಾರಿ ಧುರೀಣರಾಗಿ ಮತ್ತು ರೈತರ ಕಲ್ಯಾಣದ ಬಗ್ಗೆ ಕಳಕಳಿ ಹೊಂದಿದ್ದ ಭೀಮಣ್ಣ ಖಂಡ್ರೆ ಅವರು ಹಳ್ಳಿಖೇಡ್ ನಲ್ಲಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಹುಣಜಿಯಲ್ಲಿರುವ ಮಹಾತ್ಮಾ ಗಾಂಧೀ ಸಕ್ಕರೆ ಕಾರ್ಖಾನೆಯ ಸ್ಥಾಪಕ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.