Home Crime ಪುತ್ತೂರು ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ: 106 ಕಿಲೋ ಗ್ರಾಂ ಗಾಂಜಾ ವಶ, ಇಬ್ಬರ ಬಂಧನ

ಪುತ್ತೂರು ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ: 106 ಕಿಲೋ ಗ್ರಾಂ ಗಾಂಜಾ ವಶ, ಇಬ್ಬರ ಬಂಧನ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿ.ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧನ ಮಾಡಿದ್ದಾರೆ.

ದಿ.19-01-2026 ರಂದು ಸಂಜೆ ಕಾರು ಹಾಗೂ ಅಶೋಕ್‌ ಲೈಲ್ಯಾಂಡ್‌ ಗೂಡ್ಸ್‌ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಗುಣಪಾಲ ಜೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಿದ್ದು, ತಪಾಸಣೆ ಸಂದರ್ಭ ಕಾರಿನ ಚಾಲಕ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ ಪಿ (37) ಎಂಬಾತನು, ಆತನ ವರ್ತನೆಯಿಂದ ಅನುಮಾನಗೊಂಡು ಕಾರನ್ನು ಪರಿಶೀಲನೆ ಮಾಡಿದಾಗ, ಪ್ಲಾಸ್ಟಿಕ್‌ ಕವರ್‌ಗಳಲ್ಲಿ ಸುಮಾರು 100 ಗ್ರಾಂ ತೂಕದ ಗಾಂಹಾ ಗಿಡದ ಎಲೆ, ಹೂ ಹಾಗೂ ಕಾಯಿ ತುಂಬಿದ ಕಟ್ಟು ಪತ್ತೆಯಾಗಿದೆ.

ಅದೇ ವೇಳೆ ಗೂಡ್ಸ್ ವಾಹನದ ಚಾಲಕನನ್ನು ವಿಚಾರಿಸಿದಾಗ ಆತ ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಎಂಬುದಾಗಿ ತಿಳಿಸಿದ್ದು, ವಾಹನ ಪರಿಶೀಲನೆಯಲ್ಲಿ ಒಟ್ಟು 73 ಕಟ್ಟಿ 106 ಕಿಲೋ 60 ಗ್ರಾಂ ತೂಕದ ಗಾಂಜಾ ಪತ್ತೆಯಾಗಿದೆ. ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ರೂ.53,03,000/- ಆಗಿದೆ ಎಂದು ವರದಿಯಾಗಿದೆ.

ಆರೋಪಿಗಳ ವಿಚಾರಣೆಯಲ್ಲಿ, ಈ ಗಾಂಜಾವನ್ನು ಕೇರಳ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಾರಾಟ ಮಾಡಲು ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಲಭಿಸಿದೆ.

ಪೊಲೀಸರು ಗಾಂಜಾ ಸಾಗಾಟಕ್ಕೆ ಬಳಸಿದ ಕಾರು ಮತ್ತು ಗೂಡ್ಸ್ ವಾಹನ, ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮ ಸಂಖ್ಯೆ 09/2026, ಕಲಂ 8(c), 20(b)(ii)C NDPS Act-1985 , ಮುಂದುವರಿಸಲಾಗಿದೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರೊಂದಿಗೆ ಸಿಬ್ಬಂದಿಗಳಾದ ಹರೀಶ್, ಹರ್ಷಿತ್, ಪ್ರಶಾಂತ್, ಅದ್ರಾಮ, ಪ್ರಶಾಂತ್ ರೈ, ಪ್ರವೀಣ್ ರೈ, ಭವಿತ್ ರೈ ನಾಗರಾಜ್, ಸತೀಶ್, ರಮೇಶ್, ಸುಬ್ರಮಣಿ ಹಾಗೂ ವಿನೋದ್ ಅವರುಗಳು ಭಾಗವಹಿಸಿದ್ದರು.