Home Latest Sports News Karnataka Bengaluru: ಚಿನ್ನಸ್ವಾಮಿ ಕ್ರಿಕೆಟ್‌ ಅಂಗಳದಲ್ಲೇ IPL 2026 ಉದ್ಘಾಟನೆ?

Bengaluru: ಚಿನ್ನಸ್ವಾಮಿ ಕ್ರಿಕೆಟ್‌ ಅಂಗಳದಲ್ಲೇ IPL 2026 ಉದ್ಘಾಟನೆ?

Hindu neighbor gifts plot of land

Hindu neighbour gifts land to Muslim journalist

   Bengaluru: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ ಬೆನ್ನಲ್ಲೇ, ಚಿನ್ನಸ್ವಾಮಿ ಕ್ರಿಕೆಟ್‌ ಮೈದಾನದ (Chinnaswamy Cricket Stadium) ಕಾಮಗಾರಿಯ ವೇಗವನ್ನ ಹೆಚ್ಚಿಸಲಾಗಿದೆ. 

ಕಾಲ್ತುಳಿತ ದುರಂತದ ಬಳಿಕ ಮುಚ್ಚಲಾಗಿದ್ದ ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಂತಾರಾಷ್ಟ್ರೀಯ ಹಾಗೂ ಐಪಿಎಲ್ ಪಂದ್ಯಗಳನ್ನ (IPL Match) ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ. ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯ ಚಿನ್ನಸ್ವಾಮಿಯಲ್ಲಿಯೇ ನಡೆಯುವ ಸಾಧ್ಯತೆಗಳಿದ್ದು, ಅದಕ್ಕಾಗಿ ಆರ್‌ಸಿಬಿ ಆಡಳಿತ ಮಂಡಳಿ, ಕೆಎಸ್‌ಸಿಎ (KSCA) ಸಿದ್ಧತೆ ಮಾಡಲಾಗುತ್ತಿದೆ. 

ಗೇಟ್ ನಂ.18, 19 ರ ಬಳಿ ಕಾಮಗಾರಿ ಶುರು ಮಾಡಿದ್ದು, ಎಂಟ್ರಿ- ಎಕ್ಸಿಟ್‌ಗೆ ಅಗಲವಾದ ಜಾಗದ ವ್ಯವಸ್ಥೆ ಮಾಡಲಾಗ್ತಿದೆ. ಮುಖ್ಯರಸ್ತೆಯಲ್ಲಿ ಈ ಗೇಟ್‌ಗಳು ಇರೋದ್ರಿಂದ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗದಂತೆ ಹಾಗೂ ಜನ ದಟ್ಟಣೆ ನಿಯಂತ್ರಿಸಲು ಬೇಕಾದ ಸ್ಥಳಾವಕಾಶ ಮಾಡಲಾಗುತ್ತಿದೆ.